SUDDILIVE || SHIVAMOGGA
ಹುಂಚ-ವಾಟೆಕೂಡ್ಲು ಗ್ರಾಮದಲ್ಲಿ ರಸ್ತೆ ಬದಿ ವಾಮಾಚಾರ ಆರೋಪ- Roadside witchcraft alleged in Huncha-Vatekudlu village
ಹೊಸನಗರ, ಜು.16: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ವಾಮಾಚಾರ ನಡೆಸಿರುವ ಆರೋಪ ಕೇಳಿಬಂದಿದ್ದು, ಘಟನೆ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಗ್ರಾಮಸ್ಥರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನ ಪ್ರಕಾರ, ಶೇಖರಪ್ಪ ಬಿನ್ ಶಂಕ್ರಪ್ಪ ಹಾಗೂ ಶೇಖರ ಶೆಟ್ಟಿ ಬಿನ್ ಗಣಪಯ್ಯ ಶೆಟ್ಟಿ ಅವರ ಮನೆಗಳಿಗೆ ತೆರಳುವ ರಸ್ತೆಯ ಪಕ್ಕದಲ್ಲಿ ಗುರುತಿಸಲಾಗದ ವ್ಯಕ್ತಿಗಳು ವಾಮಾಚಾರ ನಡೆಸಿರುವುದು ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ.
ದೂರಿನ ಪ್ರಕಾರ, ಜುಲೈ 15ರಂದು ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿ ಇದ್ದ ವಸ್ತುಗಳನ್ನು ಕಂಡು ಭಯಗೊಂಡು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಇದೇ ರಸ್ತೆಯನ್ನು ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪ್ರತಿದಿನ ಸಂಚರಿಸುತ್ತಿರುವುದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಾಮಾಚಾರ ನಡೆಸಿದವರನ್ನು ಪತ್ತೆಹಚ್ಚಿ, ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದು ಗ್ರಾಮಸ್ಥರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.
Roadside witchcraft alleged in Huncha-Vatekudlu village
