SUDDILIVE || SHIVAMOGGA
ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ವರಿಷ್ಠರೇ ತೀರ್ಮಾನ ಕೈಗೊಳ್ಳುತ್ತಾರೆ: ಕುಮಾರ್ ಬಂಗಾರಪ್ಪ- Seniors will take decision on change of state BJP president: Kumar Bangarappa
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಕೇಂದ್ರ ವರಿಷ್ಠರೇ ಕೈಗೊಳ್ಳಲಿದ್ದು, ಅವರು ನೀಡುವ ಯಾವುದೇ ಆದೇಶವನ್ನು ಪಕ್ಷದ ಕಾರ್ಯಕರ್ತನಾಗಿ ಪಾಲಿಸುವುದು ನನ್ನ ಜವಾಬ್ದಾರಿ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರ ಅವಧಿ ನವೆಂಬರ್‌ವರೆಗೆ ಇರುವುದಾಗಿ ತಿಳಿಸಿ, ಅಧ್ಯಕ್ಷರ ಬದಲಾವಣೆಗಾಗಿ ಈಗಾಗಲೇ ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ ಎಂದರು. ಬದಲಾವಣೆ ನಡೆದರೆ ಸ್ವಾಗತ, ಇಲ್ಲದಿದ್ದರೂ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಪ್ರತಿಕ್ರಿಯಿಸಿದ ಕುಮಾರ್ ಬಂಗಾರಪ್ಪ, ಯತ್ನಾಳ್ ಅವರು ತಾವು ಬಿಜೆಪಿ ಚಿಹ್ನೆಯ ಮೇಲೆ ಗೆದ್ದಿದ್ದು, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂಬುದನ್ನು ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.
ಅವರನ್ನು ಮತ್ತೆ ಪಕ್ಷಕ್ಕೆ ಕರೆತಂದರೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಬಿಜೆಪಿಗೆ ಮತ್ತಷ್ಟು ಶಕ್ತಿ ಬರಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಕುರಿತು ಕಳೆದ ಎರಡು ವರ್ಷಗಳಿಂದಲೂ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಅಂತಿಮ ನಿರ್ಧಾರ ಯಾವಾಗ ಆಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಅದು ಸಂಪೂರ್ಣವಾಗಿ ಪಕ್ಷದ ವರಿಷ್ಠರ ತೀರ್ಮಾನ ಎಂದು ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದರು.
Seniors will take decision on change of state BJP president: Kumar Bangarappa
