ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ-Sexual harassment of minor girl: Accused gets 3 years rigorous imprisonment

 SUDDILIVE || SHIVAMOGGA

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ-Sexual harassment of minor girl: Accused gets 3 years rigorous imprisonment    
Sexual, harrassment

ಶಿವಮೊಗ್ಗ, ಜು.25: ಭದ್ರಾವತಿ ತಾಲೂಕಿನ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯುವಕನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹31,000 ದಂಡ ವಿಧಿಸಿದೆ.

ಪ್ರಕರಣದ ವಿವರದಂತೆ, 2024ರಲ್ಲಿ ಭದ್ರಾವತಿ ತಾಲೂಕಿನ 20 ವರ್ಷದ ಯುವಕನೊಬ್ಬ 16 ವರ್ಷದ ಬಾಲಕಿಯೊಂದಿಗೆ ಗೆಳೆತನ ಬೆಳೆಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.

ಆ ವೇಳೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಕವಿತಾ ಇ. ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಶಿವಮೊಗ್ಗ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದರು.

ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದ ನ್ಯಾಯಾಧೀಶ ನಿಂಗನಗೌಡ ಪಾಟೀಲ್ ಅವರು ಜುಲೈ 23ರಂದು ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹31,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Sexual harassment of minor girl: Accused gets 3 years rigorous imprisonment

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close