ಶಿವಮೊಗ್ಗ | KSRTC ಬಸ್ ನಿಲ್ದಾಣದ ಶೌಚಾಲಯದಲ್ಲೇ ವ್ಯಕ್ತಿ ಆತ್ಮಹತ್ಯೆ- Shimoga | Man commits suicide in toilet of KSRTC bus station

SUDDILIVE || SHIVAMOGGA

ಶಿವಮೊಗ್ಗ  | KSRTC ಬಸ್ ನಿಲ್ದಾಣದ ಶೌಚಾಲಯದಲ್ಲೇ ವ್ಯಕ್ತಿ ಆತ್ಮಹತ್ಯೆ- Shimoga | Man commits suicide in toilet of KSRTC bus station  
Shivamogga, ksrtc

ಶಿವಮೊಗ್ಗ, ಜು.17: ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ (KSRTC) ಕೇಂದ್ರ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮೃತರನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಮ್. ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಬೆಳಿಗ್ಗೆ ಎಂದಿನಂತೆ ಶೌಚಾಲಯ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಶೌಚಾಲಯದ ಒಳಭಾಗದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.


ಪ್ರಾಥಮಿಕ ತನಿಖೆಯಲ್ಲಿ, ಮೃತರು ತಮ್ಮದೇ ಪ್ಯಾಂಟ್ ಅನ್ನು ಬಳಸಿ ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಪೊಲೀಸರು ಸ್ಥಳ ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರು ಶಿವಮೊಗ್ಗಕ್ಕೆ ಯಾವ ಕಾರಣಕ್ಕೆ ಬಂದಿದ್ದರು, ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಪೂರ್ಣಗೊಂಡ ಬಳಿಕವೇ ಲಭ್ಯವಾಗುವ ಸಾಧ್ಯತೆ ಇದೆ.

Shimoga | Man commits suicide in toilet of KSRTC bus station

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close