ಶಿವಮೊಗ್ಗ: ಪೌರಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ-ರಾಜ್ಯ ಸರ್ಕಾರ ಬದ್ಧ – ಶಾಸಕ ಎಸ್.ಎನ್. ಚೆನ್ನಬಸಪ್ಪ- Shivamogga: Central and state governments committed to the welfare of civil servants – MLA S.N. Chennabasappa

 SUDDILIVE || SHIVAMOGGA

ಶಿವಮೊಗ್ಗ: ಪೌರಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ-ರಾಜ್ಯ ಸರ್ಕಾರ ಬದ್ಧ – ಶಾಸಕ ಎಸ್.ಎನ್. ಚೆನ್ನಬಸಪ್ಪ- Shivamogga: Central and state governments committed to the welfare of civil servants – MLA S.N. Chennabasappa  

Shivamogga, welfare

ಶಿವಮೊಗ್ಗ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 'ನಮಸ್ತೆ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಸ್.ಎನ್. ಚೆನ್ನಬಸಪ್ಪ, ಪೌರಕಾರ್ಮಿಕರ ಕಲ್ಯಾಣ, ಸುರಕ್ಷತೆ ಹಾಗೂ ಕುಟುಂಬದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ ಎಂದು ಹೇಳಿದರು.

ಯಾಂತ್ರೀಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗಾಗಿ ರೂಪಿಸಲಾದ ರಾಷ್ಟ್ರೀಯ ಯೋಜನೆ ಸ್ವಚ್ಛ ಭಾರತ ಅಭಿಯಾನದ ಭಾಗವಾಗಿದ್ದು, ಪೌರಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಜೀವನಮಟ್ಟ ಸುಧಾರಣೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಪೌರಕಾರ್ಮಿಕರು ನಗರದ ಸ್ವಚ್ಛತೆ ಮತ್ತು ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಯುಜಿಡಿ ಸಮಸ್ಯೆಗಳಿಂದ ಹಿಡಿದು ನಗರದ ನೈರ್ಮಲ್ಯ ನಿರ್ವಹಣೆವರೆಗೆ ಅವರು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಗೆ ಸಮಾಜ ಸದಾ ಋಣಿಯಾಗಿರಬೇಕು ಎಂದು ಹೇಳಿದರು.

ಹಿಂದೆ ಮಲ ಹೊರುವ ಪದ್ಧತಿ ಅಸ್ತಿತ್ವದಲ್ಲಿದ್ದರೂ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಂತಹ ನಾಯಕರ ಪ್ರಯತ್ನದಿಂದ ಆ ಅಮಾನವೀಯ ಪದ್ಧತಿ ಅಂತ್ಯಗೊಂಡಿದೆ ಎಂದು ಸ್ಮರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನದ ಮೂಲಕ ದೇಶದಲ್ಲಿ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಿ ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸಿದ ಪರಿಣಾಮ ದೇಶದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ ಎಂದು ಹೇಳಿದರು.

ರ್ಯಾಗ್ ಪಿಕರ್ಸ್ ಮಕ್ಕಳ ಶಿಕ್ಷಣಕ್ಕಾಗಿ ಶಿವಮೊಗ್ಗದಲ್ಲಿ ಆರಂಭವಾದ "ಮಾಧವ ನೆಲೆ" ಯೋಜನೆಯನ್ನು ಉದಾಹರಿಸಿದ ಅವರು, ಸಮಾಜಮುಖಿ ಸಂಘಟನೆಗಳ ಕಾರ್ಯದಿಂದ ಇಂದು ಆ ಮಕ್ಕಳು ಉನ್ನತ ಶಿಕ್ಷಣ ಪಡೆದು ಇಂಜಿನಿಯರ್‌, ವೈದ್ಯ ಹಾಗೂ ಐಎಎಸ್ ಅಧಿಕಾರಿಯಾಗುವ ಕನಸು ಕಾಣುತ್ತಿರುವುದು ಸಂತಸದ ಸಂಗತಿ ಎಂದರು.

ಪೌರಕಾರ್ಮಿಕರು ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದಿಂದ ಬ್ಯಾಂಕುಗಳ ಮೂಲಕ ಸಾಲ, ಸಬ್ಸಿಡಿ ಸೇರಿದಂತೆ ವಿವಿಧ ಆರ್ಥಿಕ ನೆರವು ಲಭ್ಯವಿದ್ದು, ಕಸ ವಿಲೇವಾರಿ ಮತ್ತು ಸ್ವಚ್ಛತಾ ಸಂಬಂಧಿತ ಉದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಸ ಸಾಗಣೆ ವಾಹನ ಚಾಲಕರನ್ನೂ ಪೌರಕಾರ್ಮಿಕರ ಸಮಾನವಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಸರ್ಕಾರ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ಹೇಳಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ ಶಾಸಕ ಚೆನ್ನಬಸಪ್ಪ, ಪೌರಕಾರ್ಮಿಕರ ಕುಟುಂಬಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಪೌರಕಾರ್ಮಿಕರನ್ನ ರಿಗ್ ಪಿಕರ್ಸ್ ಮೊದಲಾದವರನ್ನ ಸನ್ಮಾನಿಸಲಾಯಿತು. 

Shivamogga: Central and state governments committed to the welfare of civil servants – MLA S.N. Chennabasappa 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close