ಶಿವಮೊಗ್ಗ ಶಿಕ್ಷಣ ಇಲಾಖೆಯ ಲೆಕ್ಕ ಅಧೀಕ್ಷಕ ಎಂ. ಸುಬ್ರಮಣ್ಯ ನಿಧನ-Shivamogga Education Department Accounts Superintendent M. Subramanya passes away

 SUDDILIVE || SHIVAMOGGA

ಶಿವಮೊಗ್ಗ ಶಿಕ್ಷಣ ಇಲಾಖೆಯ ಲೆಕ್ಕ ಅಧೀಕ್ಷಕ ಎಂ. ಸುಬ್ರಮಣ್ಯ ನಿಧನ-Shivamogga Education Department Accounts Superintendent M. Subramanya passes away    
Shivamogga, education

ಶಿವಮೊಗ್ಗ, ಜು. 28: ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ (ಡಿಡಿಪಿಐ) ಕಚೇರಿಯ ಲೆಕ್ಕ ಅಧೀಕ್ಷಕರಾಗಿದ್ದ ಎಂ. ಸುಬ್ರಮಣ್ಯ ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

ಶಿವಮೊಗ್ಗದ ವಿದ್ಯಾನಗರ ನಿವಾಸಿಯಾಗಿದ್ದ ಸುಬ್ರಮಣ್ಯ ಅವರು ಹಲವು ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಸರಳ ವ್ಯಕ್ತಿತ್ವ, ಕರ್ತವ್ಯನಿಷ್ಠೆ ಮತ್ತು ಸಹೋದ್ಯೋಗಿಗಳೊಂದಿಗೆ ಬೆಳೆಸಿಕೊಂಡಿದ್ದ ಆತ್ಮೀಯ ಸಂಬಂಧದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಲಾಖೆಯ ಆಡಳಿತ ಹಾಗೂ ಹಣಕಾಸು ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಅವರು ಉತ್ತಮ ಹೆಸರು ಗಳಿಸಿದ್ದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಬ್ರಮಣ್ಯ ಅವರ ಪತ್ನಿ ವೀಣಾ ಅವರು ಅಯನೂರು ಕೋಟೆ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅಪಾರ ಬಂಧು-ಬಳಗ, ಸ್ನೇಹಿತರು ಹಾಗೂ ಸಹೋದ್ಯೋಗಿಗಳನ್ನು ಅಗಲಿದ್ದಾರೆ.

ಅವರ ಅಗಲಿಕೆಗೆ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಇಲಾಖೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಡಿಡಿಪಿಐ ಮಂಜುನಾಥ್, ಶಿವಮೊಗ್ಗ ಬಿಇಒ ರಮೇಶ್, ಶಿಕಾರಿಪುರ ಬಿಇಒ ಲೋಕೇಶ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಸುಬ್ರಮಣ್ಯ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ, ಧೈರ್ಯ ಮತ್ತು ಸಾಂತ್ವನ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

Shivamogga Education Department Accounts Superintendent M. Subramanya passes away

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close