SUDDILIVE || SHIVAMOGGA
ತೀರ್ಥಹಳ್ಳಿ ಬಾಣಂತಿಯ ಸಾವು ಗಂಭೀರ: ಎರಡು ಹಂತದ ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ – ಆರೋಗ್ಯ ಸಚಿವ ಯು.ಟಿ.ಖಾದರ್-Theerthahalli Bananti's death is serious: Two-stage investigation, action against the guilty – Health Minister U.T. Khader
ಶಿವಮೊಗ್ಗ: ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದ ಬಳಿಕ ಬಾಣಂತಿ ಮೃತಪಟ್ಟ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಪ್ರತ್ಯೇಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, "ಹೆರಿಗೆ ಒಂದು ರೋಗವಲ್ಲ. Delivery is not a disease. ಹೆರಿಗೆಗಾಗಿ ಆಸ್ಪತ್ರೆಗೆ ಬರುವ ಯಾವುದೇ ಮಹಿಳೆ ಸಾವನ್ನಪ್ಪಬಾರದು. ತಾಯಿ ಮತ್ತು ಮಗುವಿನ ಸುರಕ್ಷತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೂ ಇಂತಹ ಘಟನೆ ಸಂಭವಿಸಿರುವುದು ನೋವು ತಂದಿದೆ" ಎಂದು ಹೇಳಿದರು.
ತೀರ್ಥಹಳ್ಳಿಯಿಂದ ಮೆಗ್ಗಾನ್ ಆಸ್ಪತ್ರೆಗೆ ರೋಗಿಯನ್ನು ಕಳುಹಿಸಿದ ನಂತರ ಏನಾಯಿತು, ತಾಲೂಕು ಆಸ್ಪತ್ರೆಯಲ್ಲಿ ಯಾವುದೇ ಲೋಪವಾಗಿದೆಯೇ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಲ್ಲಿ ಏನಾದರೂ ಸಮಸ್ಯೆಯಾಗಿದೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸದ್ಯ ಜಿಲ್ಲಾಧಿಕಾರಿ ಮೂಲಕ ತನಿಖೆಗೆ ಆದೇಶ ನೀಡಿದ್ದು, ಜೊತೆಗೆ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳ ಸಮಿತಿಯಿಂದಲೂ ಪ್ರತ್ಯೇಕ ತನಿಖೆ ನಡೆಯಲಿದೆ. ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ತೀರ್ಥಹಳ್ಳಿ ಆಸ್ಪತ್ರೆಯ ವಿರುದ್ಧ ನಿರಂತರ ಆರೋಪಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, "ಸರ್ಕಾರಿ ಆಸ್ಪತ್ರೆಗಳನ್ನು ದೂಷಿಸುವುದು ಫ್ಯಾಷನ್ ಆಗಬಾರದು. ಸಮಸ್ಯೆಗಳೇ ಇಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ವಾಸ್ತವಾಂಶ ತಿಳಿಯದೇ ಆರೋಪ ಮಾಡುವುದು ಸರಿಯಲ್ಲ. ತಿಂಗಳಿಗೆ ನೂರಕ್ಕೂ ಹೆಚ್ಚು ಹೆರಿಗೆಗಳು ಅಲ್ಲಿ ಯಶಸ್ವಿಯಾಗಿ ನಡೆಯುತ್ತಿವೆ. ಆದರೂ ರೋಗಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ನಾನು ಸ್ವತಃ ಪರಿಶೀಲಿಸುತ್ತೇನೆ" ಎಂದರು.
ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಆದ್ಯತೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯನ್ನು ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆ ಎಂದು ಸಚಿವರು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ಎಎನ್‌ಎಂ, ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಷಿಯನ್ ಹಾಗೂ ಡಿ ಗ್ರೂಪ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ದೂರದ ಹಾಗೂ ಅರಣ್ಯ ಪ್ರದೇಶಗಳಲ್ಲಿ ಕೆಲಸ ಮಾಡುವ ವೈದ್ಯರು ಮತ್ತು ಸಿಬ್ಬಂದಿಗೆ ಹೆಚ್ಚುವರಿ ವೇತನ ನೀಡುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶಾಶ್ವತ ವೈದ್ಯರ ನೇಮಕಾತಿಗೂ ಶೀಘ್ರ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಶಿವಮೊಗ್ಗಕ್ಕೆ ಹೊಸ ಜಿಲ್ಲಾ ಆಸ್ಪತ್ರೆ
ಶಿವಮೊಗ್ಗದಲ್ಲಿ ಹೊಸ ಜಿಲ್ಲಾ ಆಸ್ಪತ್ರೆ ನಿರ್ಮಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
ಮೆಗ್ಗಾನ್ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ನೀಡಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಅಗತ್ಯವಾಗಿದೆ. ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು ಎಂಬುದರ ಕುರಿತು ಚರ್ಚೆ ನಡೆಯುತ್ತಿದ್ದು, ಶೀಘ್ರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೆಎಫ್‌ಡಿ ಲಸಿಕೆ ಕುರಿತು ಕೇಂದ್ರಕ್ಕೆ ಮನವಿ
ಶಿವಮೊಗ್ಗ ಸೇರಿದಂತೆ ಮಲೆನಾಡಿನಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಹೊಸ ಕೆಎಫ್‌ಡಿ ಲಸಿಕೆಯ ಸಂಶೋಧನೆ ಮೂಲಕ ನಡೆಯುತ್ತಿದೆ ಎಂದು ಹೇಳಿದರು.
ಈ ಕುರಿತು ಕೇಂದ್ರ ಸಚಿವರನ್ನು ಭೇಟಿ ಮಾಡಿ ಸಂಶೋಧನೆಗೆ ಆದ್ಯತೆ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.
ಹಳೆಯ ಲಸಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸಿನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದು, ಹೊಸ ಲಸಿಕೆ ಲಭ್ಯವಾದ ಕೂಡಲೇ ರಾಜ್ಯಕ್ಕೆ ತರಲಾಗುವುದು ಎಂದರು.
ಔಷಧ ಕೊರತೆ ಆರೋಪ: ಪಟ್ಟಿ ಕೊಡಿ, ತನಿಖೆ ಮಾಡಿಸುತ್ತೇನೆ
ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಔಷಧ ಕೊರತೆ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಯಾವ ಔಷಧ ಕೊರತೆಯಿದೆ ಎಂಬ ಪಟ್ಟಿ ಕೊಡಿ. ತಕ್ಷಣ ತನಿಖೆ ನಡೆಸುತ್ತೇನೆ. ವಾಸ್ತವಾಂಶ ಏನೆಂಬುದನ್ನು ಪರಿಶೀಲಿಸಲಾಗುವುದು" ಎಂದು ಹೇಳಿದರು.
ಕಂಬಳ ಕುರಿತು ಸಚಿವರ ಅಭಿಪ್ರಾಯ
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಂಬಳವು ತುಳುನಾಡು ಹಾಗೂ ಕರಾವಳಿಯ ಹೆಮ್ಮೆಯ ಕ್ರೀಡೆಯಾಗಿದ್ದು, ಅದು ಕೇವಲ ಕ್ರೀಡೆಯಲ್ಲ; ಜನರ ಸಂಪ್ರದಾಯ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ ಎಂದರು.
ಕಂಬಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿಯೂ ನಡೆಸಬೇಕು ಎಂಬುದು ತಮ್ಮ ಆಶಯ. ಆದರೆ ದಸರಾದಲ್ಲಿ ನಡೆಸಬೇಕೇ ಬೇಡವೇ ಎಂಬುದನ್ನು ಸರ್ಕಾರ ಹಾಗೂ ದಸರಾ ಸಮಿತಿ ತೀರ್ಮಾನಿಸಲಿದೆ ಎಂದು ಹೇಳಿದರು.
ಎಸ್‌ಐಆರ್, ಮತದಾರರ ಪಟ್ಟಿ ಮತ್ತು ಬಿಜೆಪಿ ಆರೋಪಕ್ಕೆ ತಿರುಗೇಟು
ಎಸ್‌ಐಆರ್ ಹಾಗೂ ಅಕ್ರಮ ವಲಸಿಗರಿಗೆ ಪ್ರಮಾಣಪತ್ರ ನೀಡಿ ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ಸಚಿವರು ತಳ್ಳಿಹಾಕಿದರು.
ಎಸ್‌ಐಆರ್ ಸಂಪೂರ್ಣವಾಗಿ ಚುನಾವಣಾ ಆಯೋಗದ ವ್ಯಾಪ್ತಿಯ ವಿಷಯವಾಗಿದ್ದು, ರಾಜ್ಯ ಸರ್ಕಾರದ ಜವಾಬ್ದಾರಿ ಜನರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೆರವು ನೀಡುವುದಾಗಿದೆ ಎಂದರು.
ಡೊಮಿಸೈಲ್ ಅಥವಾ ಇತರೆ ಪ್ರಮಾಣಪತ್ರಗಳ ಅಗತ್ಯವಿರುವ ಬಡ ಜನರಿಗೆ ತುರ್ತಾಗಿ ದಾಖಲೆಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ಅದನ್ನು ರಾಜಕೀಯವಾಗಿ ನೋಡುವ ಅಗತ್ಯವಿಲ್ಲ ಎಂದು ಹೇಳಿದರು.
ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಟೀಕಿಸುವುದು ಅವರ ಕೆಲಸ. ಸರ್ಕಾರ ಜನರ ಪರವಾಗಿ ಕೆಲಸ ಮಾಡುವುದು ತನ್ನ ಕರ್ತವ್ಯ ಎಂದು ಸಚಿವರು ಪ್ರತಿಕ್ರಿಯಿಸಿದರು.
ಮಾನವ ಸಂಪನ್ಮೂಲ ಭರ್ತಿಗೆ ಮೊದಲ ಆದ್ಯತೆ
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಸಚಿವರು
