SUDDILIVE || SHIVAMOGGA
ತೀರ್ಥಹಳ್ಳಿ-ಕಾರು ಡಿಕ್ಕಿ ಹೊಡೆದು 6 ವರ್ಷದ ಮಗು ಸಾವು-Thirthahalli - 6-year-old child dies after being hit by car
ತೀರ್ಥಹಳ್ಳಿ: ಆಟವಾಡುತ್ತಾ ಏಕಾಏಕಿ ರಸ್ತೆಗೆ ಬಂದ 6 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆ ಸಮೀಪ ನಡೆದಿದೆ.
ಮೃತ ಬಾಲಕಿಯನ್ನು ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ ಸಮೀಪದ ಗುಂಡುಗದ್ದೆ ನಿವಾಸಿ ಪ್ರಗತ್ ಅವರ ಪುತ್ರ ಋಷ್ಯ (6) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಮನೆಯ ಸಮೀಪದಲ್ಲಿ ಲಾರಿಯೊಂದು ನಿಲ್ಲಿಸಲಾಗಿತ್ತು. ಇದೇ ವೇಳೆ ಆಟವಾಡುತ್ತಿದ್ದ ಋಷ್ಯ ರಸ್ತೆಯತ್ತ ಬಂದಿದ್ದಾಳೆ. ರಸ್ತೆಯ ಬದಿಯಲ್ಲಿ ಲಾರಿ ನಿಂತಿದ್ದರಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನ ಚಾಲಕನಿಗೆ ಮಗು ಕಾಣಿಸದೇ ಹೋಗಿದ್ದು, ಪರಿಣಾಮ ಕಾರು ಮಗುವಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಕುಟುಂಬದವರು ಗಾಯಗೊಂಡಿದ್ದ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಮಗುವಿನ ತಲೆಗೆ ಹಾಗೂ ದೇಹಕ್ಕೆ ಗಂಭೀರ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದ್ದು, ತಮ್ಮ ಮುದ್ದು ಕಂದಮ್ಮನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಕಂಡು ನೆರೆದಿದ್ದವರ ಕಣ್ಣಲ್ಲೂ ನೀರು ತರಿಸಿತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಸ್ತೆ ಬದಿಯಲ್ಲಿ ದೊಡ್ಡ ವಾಹನಗಳು ನಿಲ್ಲಿಸಿದ ಸಂದರ್ಭಗಳಲ್ಲಿ ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂಬ ಮಾತು ಸ್ಥಳೀಯರಿಂದ ಕೇಳಿಬಂದಿದೆ. ಈ ದುರ್ಘಟನೆ ಇಡೀ ತೀರ್ಥಹಳ್ಳಿ ಭಾಗದಲ್ಲಿ ಶೋಕದ ವಾತಾವರಣ ಮೂಡಿಸಿದೆ.
Thirthahalli - 6-year-old child dies after being hit by car
