SUDDILIVE || SHIVAMOGGA
ಸಾರಿಗೆ ಸಚಿವ ಬೈರತಿ ಸುರೇಶ್ ಜನ್ಮದಿನ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅನ್ನದಾಸೋಹ-Transport Minister Bairati Suresh's birthday: Food drive at Meggan Hospital
ಶಿವಮೊಗ್ಗ: ಕರ್ನಾಟಕ ಸರ್ಕಾರದ ಸಾರಿಗೆ ಸಚಿವ ಹಾಗೂ ಅಹಿಂದ ವರ್ಗದ ನಾಯಕ ಬೈರತಿ ಸುರೇಶ್ ಅವರ ಜನ್ಮದಿನದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಿ ಸಂಭ್ರಮದಿಂದ ಆಚರಿಸಲಾಯಿತು.
ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್. ಪ್ರಸನ್ನ ಕುಮಾರ್, "ಅನ್ನದಾಸೋಹವು ಪುಣ್ಯದ ಕೆಲಸವಾಗಿದೆ. ಸಚಿವ ಬೈರತಿ ಸುರೇಶ್ ಅವರ ಜನ್ಮದಿನವನ್ನು ಸಾಮಾಜಿಕ ಸೇವೆಯ ಮೂಲಕ ಯುವ ಕಾಂಗ್ರೆಸ್ ಆಚರಿಸುತ್ತಿರುವುದು ಶ್ಲಾಘನೀಯ. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಜನಸೇವೆ ಮಾಡುವ ಪರಂಪರೆ ಮುಂದುವರಿಯಬೇಕು," ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ ಮಾತನಾಡಿ, "ಅಹಿಂದ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಚಿವ ಬೈರತಿ ಸುರೇಶ್ ಅವರಿಗೆ ಭಗವಂತ ಇನ್ನಷ್ಟು ಶಕ್ತಿ ಹಾಗೂ ಜನಸೇವೆ ಮಾಡುವ ಅವಕಾಶವನ್ನು ನೀಡಲಿ. ಅವರ ಜನ್ಮದಿನವನ್ನು ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ," ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸೂಡ ಸದಸ್ಯ ಎಂ. ಪ್ರವೀಣ್ ಕುಮಾರ್, ಹಾಪ್‌ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಎಸ್‌ಸಿ ಘಟಕದ ಅಧ್ಯಕ್ಷ ಎಂ. ಶಿವಣ್ಣ, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹೆಚ್.ಪಿ. ಗಿರೀಶ್, ಪಂಚ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಎಂ. ರಾಹುಲ್, ಎಸ್. ಕುಮಾರೇಶ್, ಬಸವರಾಜ್, ಟಿ. ಗುರುಪ್ರಸಾದ್, ಕೆ.ಎಲ್. ಪವನ್, ಎಂ. ರಾಕೇಶ್, ನದೀಮ್, ರಾಹುಲ್ ಸಿಗೆಹಟ್ಟಿ, ರಾಜೇಶ್ ಮಂದಾರ, ಮನ್ವಿತ್ ಜೈನ್, ರಜನಿಕಾಂತ್, ಸುಬ್ರಮಣಿ, ಪ್ರದೀಪ್ ರಾಮನಕೊಪ್ಪ, ಶಿವಕುಮಾರ್ ಪುನೀಲ, ಮಿಥುನ್, ಶಮ್ಮುದ್ದೀನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
