ಆಶ್ ಟ್ಯಾಗ್ ಬಳಸಿ ಗೂಂಡಾ ರಾಜ್ ಹಾಗೂ ಕೊತ್ವಾಲ ಕಾಂಗ್ರೆಸ್ ಎಂದು ವಿಜೇಂದ್ರ ಪೋಸ್ಟ್- Vijendra posts Goonda Raj and Kotwala Congress using Ash tag

SUDDILIVE || SHIVAMOGGA

ಆಶ್ ಟ್ಯಾಗ್ ಬಳಸಿ ಗೂಂಡಾ ರಾಜ್ ಹಾಗೂ ಕೊತ್ವಾಲ ಕಾಂಗ್ರೆಸ್ ಎಂದು ವಿಜೇಂದ್ರ ಪೋಸ್ಟ್- Vijendra posts Goonda Raj and Kotwala Congress using Ash tag   

Vijendra, post

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿ ಎದುರು ನಡೆದ ಕಾಂಗ್ರೆಸ್ ಪ್ರತಿಭಟನೆಯ ಪೋಸ್ಟರ್‌ನ್ನು ಹಂಚಿಕೊಂಡಿರುವ ವಿಜಯೇಂದ್ರ, #GoondaRaj ಮತ್ತು #KotwalCongress ಹ್ಯಾಶ್‌ಟ್ಯಾಗ್‌ಗಳೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ, "ಮುಖ್ಯಮಂತ್ರಿಗಳೇ, ನಿಮ್ಮ ಪಕ್ಷದ ಕಾರ್ಯಕರ್ತರು ಗೂಂಡಾ ಪ್ರವೃತ್ತಿಯನ್ನು ಮುಂದುವರಿಸುತ್ತಿದ್ದಾರೆ. ಅವರಿಗೆ ಕಾನೂನಿನ ಭಯವೇ ಇಲ್ಲ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ ಎಂಬ ಅಹಂಕಾರದಿಂದ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಳ್ಳುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.

ಇನ್ನೂ, "ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಗೆ ನುಗ್ಗುವ ಪ್ರಯತ್ನವನ್ನು ನಮ್ಮ ಕಾರ್ಯಕರ್ತರು ತಡೆದಿದ್ದಾರೆ. ಗೂಂಡಾ ವೇಷದಲ್ಲಿರುವ ನಿಮ್ಮ ಕಾರ್ಯಕರ್ತರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಏನೇ ಮಾಡಿದರೂ ನಡೆಯುತ್ತದೆ ಎಂಬ ಮನೋಭಾವನೆ ಬೆಳೆದಿದೆ. ಗೃಹ ಸಚಿವರು ಕೂಡ ಈ ಘಟನೆ ಬಗ್ಗೆ ಒಂದೂ ಮಾತು ಆಡಿಲ್ಲ. ಗೂಂಡಾ ಪ್ರವೃತ್ತಿಯನ್ನು ಮಟ್ಟಹಾಕಿ, ಬಿಜೆಪಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು" ಎಂದು ಒತ್ತಾಯಿಸಿದ್ದಾರೆ.

ಅದೇ ವೇಳೆ, "ನಮ್ಮ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಯಮ ಕಳೆದುಕೊಳ್ಳದೆ, ತಾಳ್ಮೆಯಿಂದ ವರ್ತಿಸಬೇಕು" ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಪೋಸ್ಟ್‌ಗೂ ಮುನ್ನ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಆದರೆ, ವಿಜಯೇಂದ್ರ ಅವರು ನಮ್ಮ ಕಾರ್ಯಕರ್ತರು ಸಂಯಮ ಕಳೆದು ಕೊಳ್ಳದಂತೆ ಮನವಿ ಮಾಡುವ ಪೋಸ್ಟ್ ನ್ನ ಹಂಚಿಕೊಳ್ಳುವ  ಸುಮಾರು ಮೂರು ಗಂಟೆಗಳ ಮುಂಚೆ, ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾ ಕಚೇರಿಯತ್ತ ಮುತ್ತಿಗೆ ಹಾಕಲು ಯತ್ನಿಸಿದ್ದ ಘಟನೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಕಚೇರಿಯ ಮೇಲೆ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆದಿರುವ ಆರೋಪವೂ ಕೇಳಿಬಂದಿದೆ. 

ಆರೋಪ-ಪ್ರತ್ಯಾರೋಪ ತೀವ್ರ

ಒಂದೆಡೆ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆಂಬಲಿದಿ ನೀಟ್ ಅಕ್ರಮ ವಿರುದ್ಧ ಬಿಜೆಪಿ ಕಚೇರಿಯತ್ತ ಮುತ್ತಿಗೆ ಹಾಕಲು ಯತ್ನಿಸಿದ್ದು, ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯತ್ತ ತೆರಳಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಎರಡೂ ಪಕ್ಷಗಳು ಪರಸ್ಪರ ಹಿಂಸಾತ್ಮಕ ವರ್ತನೆಯ ಆರೋಪಗಳನ್ನು ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಾಕ್ಸಮರ ಮುಂದುವರಿದಿದೆ.

Vijendra posts Goonda Raj and Kotwala Congress using Ash tag   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close