ಸಾಗರ ರಸ್ತೆಯಲ್ಲಿರುವ ಪ್ರತಿಷ್ಠಿ ಕಾಲೇಜಿನ ಎದುರು ವಿದ್ಯಾರ್ಥಿಗಳ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ್ದು ಏಕೆ?Why were students attacked with beer bottles in front of Pratisthi College on Sagar Road?

SUDDILIVE || SHIVAMOGGA

ಸಾಗರ ರಸ್ತೆಯಲ್ಲಿರುವ ಪ್ರತಿಷ್ಠಿ ಕಾಲೇಜಿನ ಎದುರು ವಿದ್ಯಾರ್ಥಿಗಳ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ್ದು ಏಕೆ?Why were students attacked with beer bottles in front of Pratisthi College on Sagar Road?    

Student, attack

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯನ್ನು ಗುರಾಯಿಸಿದ ವಿಚಾರದಿಂದ ಆರಂಭವಾದ ಸಣ್ಣ ವಿವಾದ ಗಂಭೀರ ಸ್ವರೂಪ ಪಡೆದು, ಹೊರಗಿನಿಂದ ಯುವಕರನ್ನು ಕರೆಸಿ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಘಟನೆ ನಗರದ ಸಾಗರ ರಸ್ತೆಯಲ್ಲಿರುವ ಪ್ರತಿಷ್ಠಿತ ಕಾಲೇಜೊಂದರ ಎದುರು ನಿನ್ನೆ ನಡೆದಿದೆ. ಘಟನೆಯಲ್ಲಿ ಒಬ್ಬ ಯುವಕ ಗಾಯಗೊಂಡಿದ್ದು, ಒಬ್ಬ ಅಪ್ರಾಪ್ತನನ್ನು ರಿಮ್ಯಾಂಡ್ ರೂಂಗೆ ಕಳುಹಿಸಲಾಗಿದೆ. ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಲಭ್ಯ ಮಾಹಿತಿಯ ಪ್ರಕಾರ, ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಡಿಪ್ಲೊಮಾ ಕಾಲೇಜಿನ ವಿದ್ಯಾರ್ಥಿ ಗುರಾಯಿಸಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ವಿಚಾರವನ್ನು ವಿದ್ಯಾರ್ಥಿನಿ ತನ್ನದೇ ಕಾಲೇಜಿನ ವಿದ್ಯಾರ್ಥಿಗಳಿಗೆ ತಿಳಿಸಿದ್ದಾಳೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಕೆಲ ವಿದ್ಯಾರ್ಥಿಗಳು ಡಿಪ್ಲೊಮಾ ವಿದ್ಯಾರ್ಥಿಯನ್ನು ಪ್ರಶ್ನಿಸಲು ತೆರಳಿ, ಮಾತಿನ ಚಕಮಕಿ ಬಳಿಕ ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಯ ದೃಶ್ಯಗಳನ್ನು ಕೆಲವರು ಮೊಬೈಲ್‌ನಲ್ಲಿ ಸೆರೆಹಿಡಿದು ವಿದ್ಯಾರ್ಥಿನಿಗೆ ತೋರಿಸಿದಾಗ, ಹಲ್ಲೆಗೊಳಗಾದ ಯುವಕನೇ ತನ್ನನ್ನು ಗುರಾಯಿಸಿರಲಿಲ್ಲ ಎಂದು ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಇದರಿಂದ ತಪ್ಪು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವುದು ಗೊತ್ತಾದ ವಿದ್ಯಾರ್ಥಿಗಳು ಬಳಿಕ ಆತನ ಬಳಿ ತೆರಳಿ ಕ್ಷಮೆಯಾಚಿಸಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಸಾರ್ವಜನಿಕವಾಗಿ ತನ್ನ ಮೇಲೆ ಹಲ್ಲೆ ನಡೆದಿರುವುದರಿಂದ ಅವಮಾನವಾಗಿದೆ ಎಂದು ಭಾವಿಸಿದ ಯುವಕ, ಹೊರಗಿನಿಂದ ಕೆಲ ಯುವಕರನ್ನು ಕರೆಸಿಕೊಂಡು ಕಾಲೇಜಿನ ಎದುರಿನ ಕ್ಯಾಂಟೀನ್ ಎದುರು ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದ್ದಾನೆ ಎನ್ನಲಾಗಿದೆ. ಈ ವೇಳೆ ಎದುರಾಳಿ ವಿದ್ಯಾರ್ಥಿಗಳ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದ್ದು,ಮೂವರು ವಿದ್ಯಾರ್ಥಿಗೆ ತಲೆಗೆ  ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಎಫ್ಐಆರ್ ನಲ್ಲಿ ವಿದ್ಯಾರ್ಥಿಗೆ ಗುರಾಯಿಸಿದ, ಗುರಾಯಿಸಿದ್ದಕ್ಕೆ ವಿದ್ಯಾರ್ಥಿಗಳು ಹುಡುಕಿಕೊಂಡು ಹೋಗಿ ಹಲ್ಲೆ ನಡೆಸಿ ನಂತರ ಗುರಾಯಿಸಿದ ವ್ಯಕ್ತಿ ಆತ ಅಲ್ಲ ಎಂಬುದರ ಬಗ್ಗೆ ಎಲ್ಲೂ ಉಲ್ಲೇಕವಿಲ್ಲವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆಯಲ್ಲಿ ಭಾಗಿಯಾಗಿದ್ದ ಒಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದು ರಿಮ್ಯಾಂಡ್ ರೂಂಗೆ ಕಳುಹಿಸಿದ್ದಾರೆ. ಮತ್ತೋರ್ವ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಘಟನೆಯಿಂದ ಕಾಲೇಜು ಆವರಣ ಹಾಗೂ ಸುತ್ತಮುತ್ತ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ಹೆಚ್ಚಿನ ನಿಗಾವಹಿಸಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ.

Why were students attacked with beer bottles in front of Pratisthi College on Sagar Road?  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close