ನ್ಯೂ ಮಂಡ್ಲಿಯಲ್ಲಿ ಮನೆ ಕುಸಿತ, ಸ್ಥಳಕ್ಕೆ ಶಾಸಕ ಚೆನ್ನಬಸಪ್ಪ ಭೇಟಿ- House collapses in New Mandli, MLA Chennabasappa visits the site

 SUDDILIVE || SHIVAMOGGA

ನ್ಯೂ ಮಂಡ್ಲಿಯಲ್ಲಿ ಮನೆ ಕುಸಿತ, ಸ್ಥಳಕ್ಕೆ ಶಾಸಕ ಚೆನ್ನಬಸಪ್ಪ ಭೇಟಿ-  House collapses in New Mandli, MLA Chennabasappa visits the site  

House, collapse

ಶಿವಮೊಗ್ಗ: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮವಾಗಿ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದ ಘಟನೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ (ಚೆನ್ನಿ) ಅವರು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆ ಕುಸಿತದಿಂದ ಸಂಕಷ್ಟಕ್ಕೊಳಗಾದ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಶಾಸಕರು ಅವರ ಅಹವಾಲು ಆಲಿಸಿ ಧೈರ್ಯ ತುಂಬಿದರು. ಬಳಿಕ ಅಧಿಕಾರಿಗಳಿಗೆ ತಕ್ಷಣವೇ ಮಳೆ ಹಾನಿ ವರದಿ ಸಿದ್ಧಪಡಿಸಿ, ಸರ್ಕಾರದ ನಿಯಮಾನುಸಾರ ಗರಿಷ್ಠ ಪರಿಹಾರ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


"ನೈಸರ್ಗಿಕ ವಿಕೋಪಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ತಕ್ಷಣ ಸ್ಪಂದಿಸಿ ಮಾನವೀಯ ನೆಲೆಯಲ್ಲಿ ನೆರವು ನೀಡುವುದು ನಮ್ಮ ಜವಾಬ್ದಾರಿ. ಪರಿಹಾರ ವಿತರಣೆಯಲ್ಲಿ ಯಾವುದೇ ವಿಳಂಬ ಆಗಬಾರದು," ಎಂದು ಶಾಸಕ ಚೆನ್ನಬಸಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ವೇಳೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ್, ಎಸ್‌ಸಿ ಮೋರ್ಚಾ ನಗರ ಅಧ್ಯಕ್ಷ ವಿಜಯೇಂದ್ರ, ಕಾರ್ಯದರ್ಶಿ ರಾಘವೇಂದ್ರ, ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

House collapses in New Mandli, MLA Chennabasappa visits the site

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Girl in a jacket
close