SUDDILIVE || SHIVAMOGGA
9 ನೇ ತರಗತಿ ಹುಡುಗಿ ಡೆತ್ ನೋಟ್ ಬರೆದು ನೇಣಿಗೆ ಶರಣು?-9th-grade girl writes 'Death Note' and end her life?
9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪೋಷಕರ ವಿರುದ್ಧವೇ ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾಳೆ. ಪೋಷಕರು ಇಬ್ಬರು ಮಕ್ಕಳನ್ನು ಮಾತ್ರ ದೇವಸ್ಥಾನಕ್ಕೆ ಹೋದವೇಳೆ ನೇಣಿಗೆ ಶರಣಾಗಿದ್ದಾಳೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದೆ. ಸೃಷ್ಟಿ ನಗರದ ರಾಮಕೃಷ್ಣ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ನಿನ್ನೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಪೋಷಕರು ಓದು ಎಂದು ಬಲವಂತ ಮಾಡಿದ್ದೇ ಕಾರಣವಾಗಿರಬಹುದು ಎಂಬ ಮಾಹಿತಿ ಕೇಳಿಬಂದಿದೆ.
ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಕುಟುಂಬದಲ್ಲಿ ಮೂವರು ಮಕ್ಕಳಿದ್ದು, ಸೃಷ್ಟಿಯ ಪೋಷಕರು ಇಬ್ಬರು ಮಕ್ಕಳನ್ನು ಕರೆದುಕೊಂಡು ರಾಯರ ಆರಾಧನೆ ಹಿನ್ನಲೆಯಲ್ಲಿ ರಾಘವೇಂದ್ರ ಸ್ವಾಮಿ ಮಠಕ್ಕೆ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ. ಸೃಷ್ಟಿಯನ್ನು ಮಾತ್ರ ಮನೆಯಲ್ಲಿ ಬಿಟ್ಟು ಹೋಗಲಾಗಿತ್ತು ಎನ್ನಲಾಗಿದೆ.
ತನ್ನನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರಿಂದ ಪೋಷಕರು ಮನೆಗೆ ವಾಪಾಸ್ ಬರುವದರೊಳಗೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಮಾತುಗಳು ಕೇಳಿಬಂದಿವೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಕುರಿತು ಕುಟುಂಬದವರು ನೀಡಿರುವ ದೂರು ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಹೊರಬರಬೇಕಿದೆ.
ಘಟನೆಯಿಂದ ಕುಟುಂಬಸ್ಥರು ಹಾಗೂ ವಿದ್ಯಾರ್ಥಿನಿಯ ಪರಿಚಯಸ್ಥರಲ್ಲಿ ದುಃಖ ಆವರಿಸಿದೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಸಾವಿನ ಹಿನ್ನೆಲೆಯಲ್ಲಿ ಪ್ರಕರಣ ತುಂಗನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
9th-grade girl writes 'Death Note' and end her life?
