ಮೈದುಂಬಿದ ತುಂಗೆಗೆ ಬಾಗಿನ ಅರ್ಪಿಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಕುಟುಂಬ-Former DCM K.S. Eshwarappa and family pay homage to the deceased.

SUDDILIVE || SHIVAMOGGA

ಮೈದುಂಬಿದ ತುಂಗೆಗೆ ಬಾಗಿನ ಅರ್ಪಿಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಕುಟುಂಬ-Former DCM K.S. Eshwarappa and family pay homage to the deceased.   
Homeage, pay

ಶಿವಮೊಗ್ಗ: ರಾಜ್ಯದಲ್ಲಿ ಉತ್ತಮ ಮಳೆಯ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಪತ್ನಿ ಜಯಶ್ರೀ ಈಶ್ವರಪ್ಪ, ಪುತ್ರ ಕಾಂತೇಶ್ ಈಶ್ವರಪ್ಪ ಹಾಗೂ ಕುಟುಂಬ ಸದಸ್ಯರು ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದು ಸಂತಸದ ಸಂಗತಿ ಎಂದು ಹೇಳಿದರು. ಹಲವು ವರ್ಷಗಳ ಬಳಿಕ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿವೆ. ಇದರಿಂದ ರೈತರಿಗೆ ಹೊಸ ಆಶಾಭಾವನೆ ಮೂಡಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರಕೃತಿ ಅನುಕೂಲಕರವಾಗಿರುವ ಈ ಸಂದರ್ಭದಲ್ಲಿ ಸರ್ಕಾರ ಆಡಳಿತದತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಸಂಪೂರ್ಣ ಸಚಿವ ಸಂಪುಟ ರಚನೆಗೆ ಇನ್ನಷ್ಟು ವಿಳಂಬ ಮಾಡದೆ, ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳಿಂದ ಆಡಳಿತಕ್ಕೆ ಹಿನ್ನಡೆಯಾಗಬಾರದು. ಜನರ ಸಮಸ್ಯೆಗಳ ಪರಿಹಾರ, ರೈತರ ಹಿತಾಸಕ್ತಿ, ಕುಡಿಯುವ ನೀರಿನ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದ ಭೂಕುಸಿತ ಹಾಗೂ ಪ್ರವಾಹದಂತಹ ಘಟನೆಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ತೀರ್ಥಹಳ್ಳಿ ಸಮೀಪ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ದುಃಖಕರವಾಗಿದ್ದು, ಇಂತಹ ಸಂದರ್ಭಗಳಲ್ಲಿ ಆಡಳಿತ ಯಂತ್ರ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಸರ್ಕಾರ ಅಧಿಕಾರಿಗಳ ಮೇಲಷ್ಟೇ ಅವಲಂಬಿತವಾಗದೆ, ಸಂಪೂರ್ಣ ಸಚಿವ ಸಂಪುಟದೊಂದಿಗೆ ಸಮನ್ವಯ ಸಾಧಿಸಿ ಜನಪರ ಆಡಳಿತ ನೀಡಬೇಕು. ಉಳಿದಿರುವ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿ ಜನರ ವಿಶ್ವಾಸ ಉಳಿಸಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು.

Former DCM K.S. Eshwarappa and family pay homage to the deceased.   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close