ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ-Holiday declared for schools and colleges in Sagar taluk tomorrow

SUDDILIVE || SAGARA

ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ-Holiday declared for schools and colleges in Sagar taluk tomorrow   

Holiday, school

ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಆಗಸ್ಟ್ 3) ರಜೆ ಘೋಷಿಸಲಾಗಿದೆ.

ಸಾಗರ ತಹಶೀಲ್ದಾರ್ ಆರ್. ಪ್ರತಿಭಾ ಅವರು ಈ ಕುರಿತು ಆದೇಶ ಹೊರಡಿಸಿದ್ದು, ತಾಲೂಕಿನಲ್ಲಿ ಇಂದು ವ್ಯಾಪಕವಾಗಿ ಸುರಿದ ಭಾರಿ ಮಳೆ ಹಾಗೂ ಹವಾಮಾನ ಇಲಾಖೆಯು ನಾಳೆಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ನೀಡಿರುವ ಮುನ್ಸೂಚನೆಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ (ಪಿಯುಸಿ) ಕಾಲೇಜುಗಳು, ಡಿಪ್ಲೋಮಾ ಹಾಗೂ ಐಟಿಐ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವು ಗ್ರಾಮೀಣ ರಸ್ತೆಗಳಲ್ಲೂ ನೀರು ನಿಂತಿರುವುದು ಹಾಗೂ ಕೆಲವೆಡೆ ಸಂಚಾರಕ್ಕೆ ಅಡಚಣೆ ಉಂಟಾಗಿರುವ ವರದಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

ತಹಶೀಲ್ದಾರ್ ಆರ್. ಪ್ರತಿಭಾ ಅವರು ಸಾರ್ವಜನಿಕರು ಹಾಗೂ ಪೋಷಕರು ಅನಗತ್ಯವಾಗಿ ಹೊರಗಡೆ ಸಂಚರಿಸದೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಹವಾಮಾನ ಇಲಾಖೆಯ ಮುಂದಿನ ಸೂಚನೆಗಳು ಹಾಗೂ ಜಿಲ್ಲಾಡಳಿತದ ಪ್ರಕಟಣೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ತಿಳಿಸಿದ್ದಾರೆ.

Holiday declared for schools and colleges in Sagar taluk tomorrow

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close