ಶಿವಮೊಗ್ಗದಲ್ಲಿ ಆಗಸ್ಟ್ 7ರಂದು ಉದ್ಯೋಗ ಅವಕಾಶ-Job opportunity in Shivamogga on August 7th

SUDDILIVE || SHIVAMOGGA

ಶಿವಮೊಗ್ಗದಲ್ಲಿ ಆಗಸ್ಟ್ 7ರಂದು ಉದ್ಯೋಗ ಅವಕಾಶ-Job opportunity in Shivamogga on August 7th
Job, opportunity

ಶಿವಮೊಗ್ಗ, ಆ.3: ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರೆತಿದ್ದು, ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 7ರಂದು ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಇಂಡಸ್‌ಇಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವಿವಿಧ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ (ವಾಕ್-ಇನ್ ಇಂಟರ್ವ್ಯೂ) ಆಯೋಜಿಸಲಾಗಿದೆ.

ಸಂದರ್ಶನವು ಆಗಸ್ಟ್ 7ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗದಲ್ಲಿ ನಡೆಯಲಿದೆ. ಖಾಸಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ನೇಮಕಾತಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್‌ನ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸಂದರ್ಶನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ 9380663606 ಹಾಗೂ 9108235132 ದೂರವಾಣಿ ಸಂಖ್ಯೆಗಳ ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Job opportunity in Shivamogga on August 7th

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close