ಕಾವೇರಿ ನೀರು ಬಿಡುಗಡೆ ಖಂಡಿಸಿ ಕರವೇ ಪ್ರತಿಭಟನೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ- Karave protests against Cauvery water release: Petition submitted to the District Collector

 SUDDILIVE || SHIVAMOGGA

ಕಾವೇರಿ ನೀರು ಬಿಡುಗಡೆ ಖಂಡಿಸಿ ಕರವೇ ಪ್ರತಿಭಟನೆ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ- Karave protests against Cauvery water release: Petition submitted to the District Collector   
Karave, protest

ಶಿವಮೊಗ್ಗ: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿರ್ವಹಣಾ ಸಮಿತಿಯ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಗೋಪಿ ವೃತ್ತದಲ್ಲಿ ಕರವೇ ಕಾರ್ಯಕರ್ತರು ಧರಣಿ ನಡೆಸಿ, ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನಾಕಾರರು ಗೋಪಿ ವೃತ್ತದಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕೆ.ಆರ್.ಎಸ್., ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳಲ್ಲಿ ಲಭ್ಯವಿರುವ ನೀರು ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ಸಾಕಾಗುವಷ್ಟು ಇದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ರಾಜ್ಯದ ರೈತರು ಹಾಗೂ ಸಾರ್ವಜನಿಕರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುತ್ತದೆ ಎಂದು ಆರೋಪಿಸಿದರು.

ಕನ್ನಡಿಗರ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ರಾಜ್ಯದ ಹಕ್ಕುಗಳನ್ನು ರಕ್ಷಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿದರು. ತಮಿಳುನಾಡಿನ ಒತ್ತಡಕ್ಕೆ ಮಣಿದು ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Karave protests against Cauvery water release: Petition submitted to the District Collector  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close