SUDDILIVE || SAGARA
ಶಾಸಕ ಬೇಳೂರು ಬೆಂಬಲಿಗರಿಂದ ರಾಜೀನಾಮೆ- MLA Belur supporter resigns for the post
ಸಾಗರ ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ (NSUI) ಅಧ್ಯಕ್ಷ ಸ್ಥಾನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಬೆಂಬಲಿಗ ಚಿನ್ಮಯ್ ಸಿ.ಎಂ. ರಾಜೀನಾಮೆ ಸಲ್ಲಿಸಿದ್ದಾರೆ.
ಈ ಸಂಬಂಧ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ವಿಜಯ್ ಕುಮಾರ್ ಅವರಿಗೆ ಪತ್ರ ಬರೆದಿರುವ ಚಿನ್ಮಯ್ ಸಾಗರ ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷ ಸ್ಥಾನಕ್ಕೆ ತಾವು ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡದ ಕಾರಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಜಿಲ್ಲಾಧ್ಯಕ್ಷರು ತಾವು ಸಲ್ಲಿಸಿರುವ ರಾಜೀನಾಮೆಯನ್ನು ಕೂಡಲೇ ಅಂಗೀಕರಿಸುವಂತೆ ಮನವಿ ಮಾಡಿರುವ ಅವರು, ಈವರೆಗೆ ಸಂಘಟನೆ ನೀಡಿದ ಅವಕಾಶಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಚಿನ್ಮಯ್ ಅವರ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಗರ ಎನ್‌ಎಸ್‌ಯುಐ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಆದರೆ, ರಾಜೀನಾಮೆಗೆ ಸಂಬಂಧಿಸಿದಂತೆ ಸಂಘಟನೆಯ ಜಿಲ್ಲಾ ಘಟಕದಿಂದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬೀಳಬೇಕಿದೆ.
MLA Belur supporter resigns for the post

