SUDDILIVE || SHIVAMOGGA
ಕೃಷಿ ವಿಶ್ವವಿದ್ಯಾಲಯದ ಗೇಟ್ ಬಂದ್ ಮಾಡಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ-Massive student protest blocks Agricultural University gate
ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಸಹಾಯಕ ಕೃಷಿ ಅಧಿಕಾರಿ (AO) ಹಾಗೂ ಕೃಷಿ ಅಧಿಕಾರಿ (AAO) ಸೇರಿದಂತೆ 900ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಬಿ.ಇ. ಬಯೋಟೆಕ್ನಾಲಜಿ ಪದವೀಧರರಿಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಂದು ವಿಶ್ವವಿದ್ಯಾಲಯದ ಮುಖ್ಯ ಗೇಟ್ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.
ಕೃಷಿ ಅಧಿಕಾರಿ ಹುದ್ದೆಗಳಿಗೆ ಕೃಷಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕು. ಬಿ.ಇ. ಬಯೋಟೆಕ್ನಾಲಜಿ ಪದವೀಧರರಿಗೆ ನೀಡಿರುವ ಅವಕಾಶವನ್ನು ಹಿಂಪಡೆಯಬೇಕು. ಜೊತೆಗೆ ಖಾಸಗಿ ಕೃಷಿ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಧಾರವಾಡ, ರಾಯಚೂರು, ಬೆಂಗಳೂರು ಹಾಗೂ ಮಂಡ್ಯ ಕೃಷಿ ವಿಶ್ವವಿದ್ಯಾಲಯಗಳಲ್ಲಿಯೂ ಇದೇ ಬೇಡಿಕೆಯನ್ನು ಮುಂದಿಟ್ಟು ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ 10–15 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು, ಇಂದು "ಬೆಂಗಳೂರು ಚಲೋ" ಹೋರಾಟಕ್ಕೆ ಬೆಂಬಲ ಸೂಚಿಸಿ ವಿಶ್ವವಿದ್ಯಾಲಯದ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಗುರುರಾಜ್, ಮಲ್ಲೇಶ್ ನಾಯ್ಕ್ ಸೇರಿದಂತೆ ಹಲವರು ಭಾಗವಹಿಸಿ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
Massive student protest blocks Agricultural University gate
