ಕೆಲ ಪರೀಕ್ಷಾ ಕೇಂದ್ರದಲ್ಲಿ ಸಾಲುಗಟ್ಟಿದ ವಿದ್ಯಾರ್ಥಿಗಳು ಕೆಲ ಕೇಂದ್ರಗಳಲ್ಲಿ ಸರಳ ಪ್ರವೇಶ-Students queued up at some exam centres, easy entry at some centres

SUDDILIVE || SHIVAMOGGA

ಕೆಲ ಪರೀಕ್ಷಾ ಕೇಂದ್ರದಲ್ಲಿ ಸಾಲುಗಟ್ಟಿದ ವಿದ್ಯಾರ್ಥಿಗಳು ಕೆಲ ಕೇಂದ್ರಗಳಲ್ಲಿ ಸರಳ ಪ್ರವೇಶ-Students queued up at some exam centres, easy entry at some centres   

Student, qued

Student, qued

ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವೃಂದಗಳ 3,400 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇಂದು (ಆಗಸ್ಟ್‌ 2) ಶಿವಮೊಗ್ಗ ನಗರದಲ್ಲಿ ಶಾಂತಿಯುತವಾಗಿ ಆರಂಭವಾಗಿದೆ. ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 10,737 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬೆಳಿಗ್ಗೆಯಿಂದಲೇ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಆಗಮಿಸಿ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಸರ್ವೋದಯ ಕಾಲೇಜು, ಡಿವಿಎಸ್ ಡಿಪ್ಲೊಮಾ ಕಾಲೇಜು ಸೇರಿದಂತೆ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಸರತಿ ಸಾಲಿನಲ್ಲಿ ನಿಂತು ಪರೀಕ್ಷಾ ಕೇಂದ್ರ ಪ್ರವೇಶಿಸಿದ ದೃಶ್ಯಗಳು ಕಂಡುಬಂದವು. ಆದರೆ, ಕೆಲವು ಇತರೆ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಜನಸಂದಣಿ ಅಥವಾ ಉದ್ದನೆಯ ಸರದಿ ಸಾಲಿನ ದೃಶ್ಯಗಳು ಕಂಡುಬಂದಿಲ್ಲ.

ಪರೀಕ್ಷೆಯು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಈಗಾಗಲೇ ನಿಷೇಧಾಜ್ಞೆ (ಸೆಕ್ಷನ್ 163) ಜಾರಿಗೊಳಿಸಲಾಗಿದ್ದು, ಅನಗತ್ಯವಾಗಿ ಸಾರ್ವಜನಿಕರು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ.

ಪರೀಕ್ಷಾ ಕಾರ್ಯವನ್ನು ಸುಗಮವಾಗಿ ನಡೆಸಲು ಮೇಲ್ವಿಚಾರಕರು, ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ, ಭದ್ರತಾ ತಪಾಸಣೆ ಹಾಗೂ ಪರೀಕ್ಷಾ ನಿಯಮಗಳ ಪಾಲನೆಗೆ ವಿಶೇಷ ಒತ್ತು ನೀಡಲಾಗಿದೆ.

Syudent, qued

ರಾಜ್ಯಾದ್ಯಂತ ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ 3,400 ಕಾನ್‌ಸ್ಟೆಬಲ್ ಹುದ್ದೆಗಳ ಭರ್ತಿಗೆ ನಡೆಯುತ್ತಿರುವ ಈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದಲೂ ಸಾವಿರಾರು ಅಭ್ಯರ್ಥಿಗಳು ಭಾಗವಹಿಸಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಬೆಳಗ್ಗೆಯಿಂದಲೇ ಚಟುವಟಿಕೆಗಳು ಜೋರಾಗಿದ್ದವು. ಪರೀಕ್ಷೆ ಪಾರದರ್ಶಕ ಹಾಗೂ ಅಕ್ರಮರಹಿತವಾಗಿ ನಡೆಸಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

Students queued up at some exam centres, easy entry at some centres

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close