SUDDILIVE || SHIVAMOGGA
ಆನಂದಪುರ ಪೊಲೀಸ್ ಠಾಣೆಯಲ್ಲಿ 12 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು-Public auction of 12 two-wheelers at Anandapura Police Station
ಶಿವಮೊಗ್ಗ, ಆ.29: ವಾರಸುದಾರರು ಪತ್ತೆಯಾಗದ 12 ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ನಿರ್ಧರಿಸಲಾಗಿದೆ.
ವ್ಯವಹಾರ ನ್ಯಾಯಾಧೀಶರು (ಹಿವಿ) ಹಾಗೂ ಸಿಜೆಎಂ ನ್ಯಾಯಾಲಯ, ಸಾಗರ ಇವರ ಆದೇಶದ ಮೇರೆಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 12 ದ್ವಿಚಕ್ರ ವಾಹನಗಳನ್ನು ವಿಲೇವಾರಿ ಮಾಡಲಾಗುತ್ತಿದೆ.
ಸೆಪ್ಟೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ಆನಂದಪುರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿನಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ನಿಗದಿತ ಸಮಯಕ್ಕೆ ಠಾಣಾ ಆವರಣಕ್ಕೆ ಆಗಮಿಸಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಆನಂದಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಾಜಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಆನಂದಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.
