ಆಗಸ್ಟ್ 21ರಂದು ಶಿವಮೊಗ್ಗದಲ್ಲಿ ಉದ್ಯೋಗ ನೇರ ಸಂದರ್ಶನ-Direct job interview in Shivamogga on August 21

 SUDDILIVE || SHIVAMOGGA

ಆಗಸ್ಟ್ 21ರಂದು ಶಿವಮೊಗ್ಗದಲ್ಲಿ ಉದ್ಯೋಗ ನೇರ ಸಂದರ್ಶನ-Direct job interview in Shivamogga on August 21    
Job, fair



ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಆಗಸ್ಟ್ 21ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂದರ್ಶನ ನಡೆಯಲಿದೆ.

ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನಕ್ಕೆ ಯಾವುದೇ ಶುಲ್ಕ ಇರುವುದಿಲ್ಲ.

ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಉದ್ಯೋಗ ಹುಡುಕುತ್ತಿರುವ ಅರ್ಹ ಯುವಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Direct job interview in Shivamogga on August 21 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close