SUDDILIVE || SAGARA
ಬಳಸಗೋಡು ಬಳಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು-Accident near Balasagodu: Bike rider dies on the spot
ಸಾಗರ: ಸಾಗರ ತಾಲೂಕಿನ ಬಳಸಗೋಡು ಸಮೀಪ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮೃತರನ್ನು ಸಾಗರದ ಚಿಪ್ಳಿ–ಲಿಂಗದಹಳ್ಳಿ ಮೂಲದ ಅರ್ಜುನ ಎಂದು ಗುರುತಿಸಲಾಗಿದೆ. ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಅರ್ಜುನ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ನಿಖರ ಕಾರಣ ಹಾಗೂ ಕಾರಿನಲ್ಲಿದ್ದವರ ಸ್ಥಿತಿಗತಿ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾದ ಬಳಿಕ ಅಪಘಾತದ ಸಂಪೂರ್ಣ ವಿವರ ತಿಳಿದುಬರಲಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
