ಗೌತಮಪುರದಲ್ಲಿ ಅಕ್ರಮ ಗಾಂಜಾ ಬೆಳೆ ಪತ್ತೆ: 16.4 ಕೆಜಿ ಗಾಂಜಾ ವಶ, ಆರೋಪಿ ಬಂಧನ-Illegal cannabis cultivation discovered in Gautamapura: 16.4 kg of cannabis seized, accused arrested

 SUDDILIVE || SHIVAMOGGA

ಗೌತಮಪುರದಲ್ಲಿ ಅಕ್ರಮ ಗಾಂಜಾ ಬೆಳೆ ಪತ್ತೆ: 16.4 ಕೆಜಿ ಗಾಂಜಾ ವಶ, ಆರೋಪಿ ಬಂಧನ-Illegal cannabis cultivation discovered in Gautamapura: 16.4 kg of cannabis seized, accused arrested
Ganja, raid




ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ತೋಟದ ಮೇಲೆ ಪೊಲೀಸರು ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಪೊಲೀಸರು ಗೌತಮಪುರದ ಬಸವರಾಜ್ ಎಂಬುವವರ ಮನೆಯ ಹಿಂಭಾಗದ ತೋಟದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಲಾಗಿದೆ.

ದಾಳಿಯಲ್ಲಿ ಸುಮಾರು 16.4 ಕೆಜಿ (16,400 ಗ್ರಾಂ) ಹಸಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 2.10 ಲಕ್ಷ ರೂ. ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಕುಮಾರ ಎಂಬಾತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮನೆಯ ಹಿಂಭಾಗದ ತೋಟದಲ್ಲೇ ಗಾಂಜಾ ಬೆಳೆಸಲಾಗುತ್ತಿತ್ತು ಎನ್ನಲಾಗಿದ್ದು, ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Illegal cannabis cultivation discovered in Gautamapura: 16.4 kg of cannabis seized, accused arrested

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close