ಹೊಸಹಳ್ಳಿಯಲ್ಲಿ ಹಿಟ್ ಆ್ಯಂಡ್ ರನ್: ಮಿಲಾದ್ ಅಲಂಕಾರ ಮಾಡುತ್ತಿದ್ದ ಮೂವರು ಯುವಕರಿಗೆ ಕಾರು ಡಿಕ್ಕಿ-Hit and run in Hosahalli: Three youths decorating for Milad hit by car

 SUDDILIVE || SHIVAMOGGA

ಹೊಸಹಳ್ಳಿಯಲ್ಲಿ ಹಿಟ್ ಆ್ಯಂಡ್ ರನ್: ಮಿಲಾದ್ ಅಲಂಕಾರ ಮಾಡುತ್ತಿದ್ದ ಮೂವರು ಯುವಕರಿಗೆ ಕಾರು ಡಿಕ್ಕಿ-Hit and run in Hosahalli: Three youths decorating for Milad hit by car   
Hit, run

Hit, run



ಶಿವಮೊಗ್ಗ:
ನಗರದ ಹೊರವಲಯದ ಹೊಸಹಳ್ಳಿ ಬಳಿ ಭಾನುವಾರ ರಾತ್ರಿ ಹಿಟ್ ಆ್ಯಂಡ್ ರನ್ ಘಟನೆ ಸಂಭವಿಸಿದ್ದು, ಮಿಲಾದ್ ಹಬ್ಬದ ಅಂಗವಾಗಿ ರಸ್ತೆ ಬದಿಯಲ್ಲಿ ಅಲಂಕಾರ ಕಾರ್ಯದಲ್ಲಿ ತೊಡಗಿದ್ದ ಮೂವರು ಯುವಕರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.

ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯುವಕರು ರಸ್ತೆ ಬದಿಯಲ್ಲಿ ಅಲಂಕಾರ ಕಾರ್ಯ ನಡೆಸುತ್ತಿದ್ದ ವೇಳೆ, ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗದತ್ತ ವೇಗವಾಗಿ ಬಂದ ಸಿಲ್ವರ್ ಬಣ್ಣದ ಕಾರು ಏಕಾಏಕಿ ಯುವಕರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಮೂವರು ಯುವಕರು ಗಾಯಗೊಂಡಿದ್ದಾರೆ.

ಗಾಯಾಳುಗಳ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೋರ್ವ ಯುವಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಗೊಂಡ ಯುವಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸಿದ ಬಳಿಕ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಹೀಗಾಗಿ ಪ್ರಕರಣ ಹಿಟ್ ಆ್ಯಂಡ್ ರನ್ ಸ್ವರೂಪ ಪಡೆದುಕೊಂಡಿದೆ.

Hit, run

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಸಿಲ್ವರ್ ಬಣ್ಣದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಸಾಧ್ಯತೆಯಿದ್ದು, ಅಪಘಾತದ ನಿಖರ ಕಾರಣ ಹಾಗೂ ಚಾಲಕನ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Hit and run in Hosahalli: Three youths decorating for Milad hit by car   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close