ಕೊಡಚಾದ್ರಿಯಲ್ಲಿ 60 ಅಡಿ ಕಂದಕಕ್ಕೆ ಜಾರಿದ ಪ್ರವಾಸಿಗ: ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಪವಾಡಸದೃಶ ಪಾರು!Tourist slides into 60-foot ravine at Kodachadri: Miraculous escape thanks to jeep driver's presence of mind!

SUDDILIVE || HOSANAGARA

ಕೊಡಚಾದ್ರಿಯಲ್ಲಿ 60 ಅಡಿ ಕಂದಕಕ್ಕೆ ಜಾರಿದ ಪ್ರವಾಸಿಗ: ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಪವಾಡಸದೃಶ ಪಾರು!Tourist slides into 60-foot ravine at Kodachadri: Miraculous escape thanks to jeep driver's presence of mind!   



ಹೊಸನಗರ ತಾಲೂಕಿನ ವಿಶ್ವಪ್ರಸಿದ್ಧ ಕೊಡಚಾದ್ರಿ ಬೆಟ್ಟದಲ್ಲಿ ಚಾರಣಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಆಯತಪ್ಪಿ ಸುಮಾರು 60 ಅಡಿ ಆಳದ ಕಂದಕಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಪ್ರವಾಸಿಗ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

​ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದ ಪ್ರದೀಪ್ ಗಾಯಗೊಂಡ ದುರ್ದೈವಿ. ಇವರು ಕುಟುಂಬ ಸಮೇತರಾಗಿ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿದ್ದರು. ಶಂಕರಾಚಾರ್ಯರ ಸರ್ವಜ್ಞ ಪೀಠಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಿಢೀರನೆ ತಲೆಸುತ್ತು ಬಂದಿದ್ದರಿಂದ ನಿಯಂತ್ರಣ ತಪ್ಪಿ ಕಂದಕಕ್ಕೆ ಜಾರಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಜೀಪ್ ಚಾಲಕರು, ಕಂದಕಕ್ಕೆ ಹಗ್ಗ ಇಳಿಸಿ ಪ್ರದೀಪ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ. ಬಳಿಕ ತಮ್ಮ ಜೀಪಿನಲ್ಲಿ ಗಾಯಾಳುವನ್ನು ಬೆಟ್ಟದ ಕೆಳಭಾಗಕ್ಕೆ ಕರೆತಂದಿದ್ದಾರೆ.

​ಅರಣ್ಯ ಇಲಾಖೆ ವಿರುದ್ಧ ಆಕ್ರೋಶ:

ಘಟನೆ ಬಳಿಕ ಗಾಯಾಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid Kit) ಲಭ್ಯವಿಲ್ಲದೆ ಕುಟುಂಬಸ್ಥರು ಪರದಾಡಿದರು. ಪ್ರಸಿದ್ಧ ಪ್ರವಾಸಿ ತಾಣವಾಗಿದ್ದರೂ ಕನಿಷ್ಠ ಸೌಕರ್ಯ ಒದಗಿಸದ ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಕುಟುಂಬಸ್ಥರು ಹಿಡಿಶಾಪ ಹಾಕಿದರು.

​ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Tourist slides into 60-foot ravine at Kodachadri: Miraculous escape thanks to jeep driver's presence of mind!

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close