ಮರಳಿ ಶಾಲೆಗೆ ಅಭಿಯಾನ: 336 ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ-'Back to School' Campaign: 336 Students Return to School

 SUDDILIVE || SHIVAMOGGA

ಮರಳಿ ಶಾಲೆಗೆ ಅಭಿಯಾನ: 336 ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ-'Back to School' Campaign: 336 Students Return to School    
Marali, shalege


ಶಿವಮೊಗ್ಗ:
ಶಾಲೆಯಿಂದ ಹೊರಗುಳಿದ ಹಾಗೂ ವಿವಿಧ ಕಾರಣಗಳಿಂದ ಶಿಕ್ಷಣದಿಂದ ದೂರ ಉಳಿದಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಮ್ಮಿಕೊಂಡಿರುವ ‘ಮರಳಿ ಶಾಲೆಗೆ’ ಅಭಿಯಾನಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಇದುವರೆಗೆ ಒಟ್ಟು 336 ವಿದ್ಯಾರ್ಥಿಗಳನ್ನು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಕರೆತರಲಾಗಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಆಗಸ್ಟ್ 11, 2026ರವರೆಗೆ ಒಟ್ಟು 250 ವಿದ್ಯಾರ್ಥಿಗಳನ್ನು ಗುರುತಿಸಿ ‘ಮರಳಿ ಶಾಲೆಗೆ’ ಅಭಿಯಾನದ ಮೂಲಕ ಶಾಲೆಗೆ ಸೇರಿಸುವ ಕಾರ್ಯ ಕೈಗೊಳ್ಳಲಾಗಿತ್ತು. ಬಳಿಕ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮತ್ತಷ್ಟು ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ಶಾಲೆಗೆ ಮರಳಿಸುವ ಪ್ರಕ್ರಿಯೆ ಮುಂದುವರಿಸಲಾಗಿದೆ.

ಆಗಸ್ಟ್ 11ರ ನಂತರ ವಿವಿಧ ಪೊಲೀಸ್ ಠಾಣೆಗಳ ಮೂಲಕ ಇನ್ನೂ 6 ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಗೆ ಕಳುಹಿಸಲಾಗಿದೆ. ಇದರ ಜೊತೆಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯೊಂದರಲ್ಲೇ  83 ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಗೆ ಕಳುಹಿಸಿರುವುದು ಅಭಿಯಾನದ ಮಹತ್ವವನ್ನು ತೋರಿದೆ ಎಂದು ಎಸ್ಪಿ ನಿಖಿಲ್ ತಿಳಿಸಿದ್ದಾರೆ. 

ಈ ಮೂಲಕ ಇದುವರೆಗೆ ಒಟ್ಟು 336 ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಹೆಜ್ಜೆ ಇಟ್ಟಿದ್ದಾರೆ. ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆಯಿರುವ ಮಕ್ಕಳನ್ನು ಗುರುತಿಸಿ, ಅವರ ಕುಟುಂಬದವರೊಂದಿಗೆ ಸಮಾಲೋಚನೆ ನಡೆಸಿ, ಮಕ್ಕಳನ್ನು ಪುನಃ ಶಾಲೆಗೆ ದಾಖಲಿಸುವ ಕಾರ್ಯವನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೈಗೊಂಡಿದ್ದಾರೆ.

ಮಕ್ಕಳು ವಿವಿಧ ಕಾರಣಗಳಿಂದ ಶಾಲೆಯಿಂದ ದೂರ ಉಳಿಯದಂತೆ ನೋಡಿಕೊಳ್ಳುವುದು, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಿ ಅವರ ಶಿಕ್ಷಣ ಮುಂದುವರಿಯುವಂತೆ ಮಾಡುವುದು ಮತ್ತು ಪ್ರತಿಯೊಬ್ಬ ಮಗುವಿಗೂ ಶಿಕ್ಷಣದ ಅವಕಾಶ ಕಲ್ಪಿಸುವುದು ‘ಮರಳಿ ಶಾಲೆಗೆ’ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ 83 ವಿದ್ಯಾರ್ಥಿಗಳನ್ನು ಶಾಲೆಗೆ ಮರಳಿಸಿರುವುದು ವಿಶೇಷ ಗಮನ ಸೆಳೆದಿದ್ದು, ಇಂತಹ ಕಾರ್ಯಚಟುವಟಿಕೆಗಳು ಮುಂದುವರಿದರೆ ಇನ್ನಷ್ಟು ಮಕ್ಕಳು ಶಿಕ್ಷಣದ ಮುಖ್ಯವಾಹಿನಿಗೆ ಮರಳುವ ನಿರೀಕ್ಷೆ ಇದೆ.

ಒಟ್ಟು 336 ವಿದ್ಯಾರ್ಥಿಗಳು ಶಾಲೆಗೆ ಮರಳಿರುವುದು ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಸಾಕ್ಷಿಯಾಗಿದ್ದು, ಶಿಕ್ಷಣದಿಂದ ಹೊರಗುಳಿದಿರುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನೂ ಗುರುತಿಸಿ ಶಾಲೆಗೆ ಕರೆತರುವ ಕಾರ್ಯ ಮುಂದುವರಿಯಲಿದೆ.

Back to School' Campaign: 336 Students Return to School

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close