ಶಿವಮೊಗ್ಗ ನಗರದಲ್ಲಿ 56 ಸಾವಿರಕ್ಕೂ ಅಧಿಕ ಮತದಾರರ ಹೆಸರು ಕೈಬಿಡಲಾಗಿದೆ: ಕೆ.ಇ. ಕಾಂತೇಶ್-Names of over 56,000 voters have been dropped in Shivamogga city: K.E. Kantesh

 SUDDILIVE || SHIVAMOGGA

ಶಿವಮೊಗ್ಗ ನಗರದಲ್ಲಿ 56 ಸಾವಿರಕ್ಕೂ ಅಧಿಕ ಮತದಾರರ ಹೆಸರು ಕೈಬಿಡಲಾಗಿದೆ: ಕೆ.ಇ. ಕಾಂತೇಶ್-Names of over 56,000 voters have been dropped in Shivamogga city: K.E. Kantesh    
Kantesh, sir





ಶಿವಮೊಗ್ಗ:
ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ 2,77,098 ಮತದಾರರ ಪೈಕಿ 56,463 ಮಂದಿಯ ಹೆಸರುಗಳನ್ನು ASDDO ಪಟ್ಟಿಗೆ ಸೇರಿಸಲಾಗಿದೆ. ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟವಾಗಲಿದ್ದು, ಪಟ್ಟಿಯಿಂದ ಕೈಬಿಡಲ್ಪಟ್ಟಿರುವ ನೈಜ ಮತದಾರರನ್ನು ಗುರುತಿಸಿ ಮರು ಸೇರ್ಪಡೆಗೊಳಿಸಲು ರಾಷ್ಟ್ರಭಕ್ತರ ಬಳಗದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಳಗದ ಕೆ.ಇ. ಕಾಂತೇಶ್ ತಿಳಿಸಿದರು.

ಶಿವಮೊಗ್ಗದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ 288 ಬೂತ್‌ಗಳಲ್ಲೂ ಇಬ್ಬರು ಮಹಿಳಾ ಹಾಗೂ ಇಬ್ಬರು ಪುರುಷ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಕಾರ್ಯಕರ್ತರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಪ್ರತಿ ಮನೆಗೂ ಭೇಟಿ ನೀಡಿ ಪಟ್ಟಿಯಲ್ಲಿನ ಹೆಸರುಗಳನ್ನು ಪರಿಶೀಲಿಸಲಿದ್ದಾರೆ ಎಂದರು.

ಸ್ಥಳಾಂತರಗೊಂಡವರು, ಮೃತಪಟ್ಟವರು, ಎರಡು ಕಡೆ ಹೆಸರು ಹೊಂದಿರುವವರು ಸೇರಿದಂತೆ ವಿವಿಧ ಕಾರಣಗಳಿಂದ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ನೈಜ ಮತದಾರರ ಹೆಸರು ಕೈಬಿಟ್ಟಿದ್ದರೆ, ಅವರನ್ನು ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅಗತ್ಯ ದಾಖಲೆಗಳು ಹಾಗೂ ನಿಯಮಗಳ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಈಗಾಗಲೇ ರಾಷ್ಟ್ರಭಕ್ತರ ಬಳಗದ ವತಿಯಿಂದ ನಗರದ ಮೂರು ಕಡೆ SIR ಸಹಾಯ ಕೇಂದ್ರಗಳನ್ನು ಸ್ಥಾಪಿಸಿ 25 ಸಾವಿರಕ್ಕೂ ಹೆಚ್ಚು ಮತದಾರರಿಗೆ ಎನ್ಯೂಮರೇಷನ್ ಫಾರಂ ಭರ್ತಿ ಮಾಡಲು ಹಾಗೂ 2002ರ ಮತದಾರರ ಪಟ್ಟಿಯ ಮಾಹಿತಿಯನ್ನು ಪಡೆಯಲು ನೆರವು ನೀಡಲಾಗಿದೆ. ಮುಂದಿನ ಹಂತದಲ್ಲಿಯೂ ಮತದಾರರಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಕಾಂತೇಶ್ ಹೇಳಿದರು.

ಬಳಗದ ಕಾರ್ಯಕರ್ತರಿಗೆ ಆಗಸ್ಟ್ 30ರಂದು PACE ಕಾಲೇಜಿನ ಸಭಾಂಗಣದಲ್ಲಿ ತರಬೇತಿ ನೀಡಲಾಗುವುದು. ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಮತದಾರರ ಪಟ್ಟಿಗೆ ಸಂಬಂಧಿಸಿದ ಗೊಂದಲಗಳಿಗೆ BLO ಹಾಗೂ BLAಗಳ ಮೂಲಕ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ ಮಾತನಾಡಿದ ಈಶ್ವರಪ್ಪ, ಶಿವಮೊಗ್ಗ ನಗರದಲ್ಲಿ 56 ಸಾವಿರಕ್ಕೂ ಅಧಿಕ ಮತದಾರರ ಹೆಸರು ಕೈಬಿಡಲಾಗಿರುವ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಯಾರ ಹೆಸರು ಯಾವ ಕಾರಣಕ್ಕೆ ಪಟ್ಟಿಯಿಂದ ಬಿಟ್ಟುಹೋಗಿದೆ, ಸ್ಥಳಾಂತರವಾಗಿದ್ದರೆ ಹೊಸ ಸ್ಥಳದಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳುವ ವಿಧಾನ ಸೇರಿದಂತೆ ಅಗತ್ಯ ಮಾಹಿತಿಯನ್ನು ಕಾರ್ಯಕರ್ತರು ನೀಡಲಿದ್ದಾರೆ ಎಂದು ಹೇಳಿದರು.

ಕೆಲವರು ಕೇವಲ ಸಹಿ ಮಾಡಿ ಫಾರಂ ಸಲ್ಲಿಸಿರುವ ಸಾಧ್ಯತೆಯಿದ್ದು, ಅಂತಹ ಮತದಾರರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಬಂದರೆ, ಅದನ್ನು ಪರಿಶೀಲಿಸಿ ಅಗತ್ಯ ಸಹಕಾರ ನೀಡಲು ಮಾಹಿತಿ ಕೇಂದ್ರವನ್ನು ಆರಂಭಿಸಲಾಗುವುದು. ಕೈಬಿಡಲ್ಪಟ್ಟಿರುವ ಹಾಗೂ ದಾಖಲೆಗಳ ಕುರಿತು ಸ್ಪಷ್ಟೀಕರಣ ಅಗತ್ಯವಿರುವ ಮತದಾರರಿಗೆ ನೆರವು ನೀಡಿ, ಸಾಧ್ಯವಾದಷ್ಟು ಹೆಚ್ಚಿನ ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಮರು ಸೇರ್ಪಡೆಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದರು.

ಮತದಾರರ ಸಂವಿಧಾನಾತ್ಮಕ ಹಕ್ಕು ಮತ್ತು ಕರ್ತವ್ಯವಾದ ಮತದಾನವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ರಾಷ್ಟ್ರಭಕ್ತರ ಬಳಗವು ನಗರದ ಜನರೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು.

Names of over 56,000 voters have been dropped in Shivamogga city: K.E. Kantesh    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close