ಶಿವಮೊಗ್ಗದಲ್ಲಿ ವಿವಿಧೆಡೆ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ-80th Independence Day celebrated with enthusiasm at various locations in Shivamogga.

 SUDDILIVE || SHIVAMOGGA

ಶಿವಮೊಗ್ಗದಲ್ಲಿ ವಿವಿಧೆಡೆ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ-80th Independence Day celebrated with enthusiasm at various locations in Shivamogga.   
Independent, day
ಬ್ಯಾರಿ ಮಾಲ್ ನಲ್ಲಿ ನಡೆದ ಸ್ವಾತಂತ್ರೋತ್ಸವ


ಶಿವಮೊಗ್ಗ: ನಗರದ ವಿವಿಧೆಡೆ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ವಾತಾವರಣದಲ್ಲಿ ಆಚರಿಸಲಾಯಿತು. ಸರ್ಕಾರಿ ಶಾಲೆ, ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಬೇರೀಸ್ ಸಿಟಿ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು.

ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಧ್ವಜಾರೋಹಣ
Independent day

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಿವಮೊಗ್ಗದ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಬ್ಯಾಂಕ್ ಅಧ್ಯಕ್ಷರಾದ ಕೆ. ರಂಗನಾಥ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್.ಕೆ. ಮರಿಯಪ್ಪ, ಬ್ಯಾಂಕಿನ ಉಪಾಧ್ಯಕ್ಷರಾದ ಸಿ. ಹೊನ್ನಪ್ಪ, ನಿರ್ದೇಶಕರಾದ ಜಿ. ರಾಜು, ರೇಖಾ ಚಂದ್ರಶೇಖರ್, ಬಿ. ಲೋಕೇಶ್, ಪ್ರೇಮ ಚಂದ್ರಶೇಖರ್, ಬ್ಯಾಂಕಿನ ಸಿಇಒ ಮನೋಜ್ ಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಪಿಗ್ಮಿ ಸಂಗ್ರಹಕರು ಉಪಸ್ಥಿತರಿದ್ದರು.

ಮಲವಗೊಪ್ಪ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉಡುಗೊರೆ
Independent, day
ಮಲವಗೊಪ್ಪ ಶಾಲೆಯಲ್ಲಿ ನಡೆದ ಸ್ವಾತ್ರೋತ್ಸವ 

ಶಿವಮೊಗ್ಗ ನಗರದ ಹೊರಭಾಗದಲ್ಲಿರುವ ಮಲವಗೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಸುಮಾರು 100 ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಸೇರಿದಂತೆ ವಿವಿಧ ಹಾಡು ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.

ಬೇರೀಸ್ ಸಿಟಿ ಸೆಂಟರ್‌ನಲ್ಲಿ ಸಂಭ್ರಮ

ನಗರದ ಬೇರೀಸ್ ಸಿಟಿ ಸೆಂಟರ್‌ನಲ್ಲಿ ಕೂಡ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ವಾತಾವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ಶ್ರೀಮತಿ ನಾಜಿಯಾ ಅಮಾನ್ ಎಚ್.ಎಸ್. ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೊಹಿದ್ದೀನ್, ಆಯಿಷಾ, ಇಸ್ಮಾಯಿಲ್ ಕುಟ್ಟಿ, ಸೌಜನ್ಯ, ಬಲರಾಮ್, ಅಲೋನ್, ಸುರೇಶ್ ಶೆಟ್ಟಿ ಹಾಗೂ ಶ್ರೀನಿವಾಸ್ ಸೇರಿದಂತೆ ಗಣ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಹಾಡಿ ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಪರಸ್ಪರ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಹಂಚಿಕೊಂಡು, ದೇಶದ ಏಕತೆ, ಅಖಂಡತೆ ಹಾಗೂ ಸಮಗ್ರತೆಯನ್ನು ಕಾಪಾಡುವ ಸಂಕಲ್ಪ ವ್ಯಕ್ತಪಡಿಸಿದರು.

ಶಿವಮೊಗ್ಗದ ವಿವಿಧೆಡೆ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ದೇಶಭಕ್ತಿ ಹಾಗೂ ಸಂಭ್ರಮದಿಂದ ಕೂಡಿದ್ದು, ಸಾರ್ವಜನಿಕರ ಗಮನ ಸೆಳೆದವು.

80th Independence Day celebrated with enthusiasm at various locations in Shivamogga.   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close