ಶಿವಮೊಗ್ಗದಲ್ಲಿ ಅರ್ಥಪೂರ್ಣವಾಗಿ ನಡೆದ 80ನೇ ಸ್ವಾತಂತ್ರ್ಯೋತ್ಸವ; 18 ಸಾವಿರ ಶಾಲಾ ಮಕ್ಕಳ ಸಮ್ಮುಖದಲ್ಲಿ ಧ್ವಜಾರೋಹಣ-80th Independence Day celebrated meaningfully in Shivamogga; flag hoisting held in the presence of 18,000 school children.

 SUDDILIVE || SHIVAMOGGA

ಶಿವಮೊಗ್ಗದಲ್ಲಿ ಅರ್ಥಪೂರ್ಣವಾಗಿ ನಡೆದ 80ನೇ ಸ್ವಾತಂತ್ರ್ಯೋತ್ಸವ; 18 ಸಾವಿರ ಶಾಲಾ ಮಕ್ಕಳ ಸಮ್ಮುಖದಲ್ಲಿ ಧ್ವಜಾರೋಹಣ-80th Independence Day celebrated meaningfully in Shivamogga; flag hoisting held in the presence of 18,000 school children.    
Independent, day



ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸುಮಾರು 18 ಸಾವಿರ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ದೇಶಭಕ್ತಿ ಮತ್ತು ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಂದೇ ಮಾತರಂ ಗಾಯನ ನಡೆಯಿತು. ಬಳಿಕ ಡಿಆರ್ ಪೊಲೀಸ್ ಸಿಬ್ಬಂದಿಯಿಂದ ರಾಷ್ಟ್ರಗೀತೆ ‘ಜನಗಣಮನ’ ಹಾಗೂ ಸರ್ವೋದಯ ಶಾಲೆಯ ವಿದ್ಯಾರ್ಥಿಗಳಿಂದ ನಾಡಗೀತೆ ಗಾಯನ ನಡೆಯಿತು.

ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವಂತೆ ಹಸಿರು, ಬಿಳಿ ಮತ್ತು ಕೇಸರಿ ಬಣ್ಣದ ಬಲೂನ್‌ಗಳನ್ನು ಆಕಾಶಕ್ಕೆ ಹಾರಿಸಲಾಯಿತು. ಇದಕ್ಕೂ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ನಂತರ ಸಚಿವರು ತೆರೆದ ಜೀಪಿನಲ್ಲಿ ಕ್ರೀಡಾಂಗಣದ ಮೈದಾನದಲ್ಲಿ ಸಂಚರಿಸಿ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಸಿ ಹಾಗೂ ಎನ್‌ಸಿಸಿ ಸೇರಿದಂತೆ 29 ವಿವಿಧ ತುಕಡಿಗಳ ಪಥಸಂಚಲನ ಮತ್ತು ಗೌರವ ವಂದನೆ ಕಾರ್ಯಕ್ರಮವನ್ನು ವೀಕ್ಷಿಸಿದರು. ಬಳಿಕ ಸಚಿವರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಶಾಲಾ ಮಕ್ಕಳ ದೇಶಭಕ್ತಿ ಘೋಷಣೆಗಳು, ರಾಷ್ಟ್ರಧ್ವಜಗಳ ಕಲರವ ಹಾಗೂ ವಿವಿಧ ಪಡೆಗಳ ಶಿಸ್ತುಬದ್ಧ ಪಥಸಂಚಲನದಿಂದ ನೆಹರೂ ಕ್ರೀಡಾಂಗಣ ಸಂಪೂರ್ಣವಾಗಿ ದೇಶಭಕ್ತಿಯ ವಾತಾವರಣದಲ್ಲಿ ಮಿಂದೆದ್ದಿತ್ತು. 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮವು ಶಿವಮೊಗ್ಗದಲ್ಲಿ ವಿಶೇಷ ಗಮನ ಸೆಳೆಯಿತು.


ನಂತರ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಭಾರತ ಅನೇಕ ವರ್ಷಗಳಿಂದ ಇದ್ದ ಶೋಷಣೆಯಿಂದ ಮುಕದತಿಪಡೆದಿದೆ. ಶಿವಮೊಗ್ಗ ಸ್ವಾತಂತ್ರ್ಯದ ನೆಲ, ಹೋರಾಟದ ನೆಲವಾಗಿದೆ. ಈಸೂರು ಸ್ವಾತಂತ್ರ್ಯದ ನೆನನಪು ಸದಾ ಹಸಿರಾಗಿದೆ. ದೊಡ್ಡತ್ಯಾಗದ ಸಂಕೇತವಾಗಿದೆ. ಸ್ವಾತಂತ್ರ್ಯ ಎಂದರೆ ಕೇವಲ ಧ್ವ ಹಾರಿಸುವುದಲ್ಲ ಗೌರವದಿಂದ ಪರಸ್ಪರ ಬದುಕುವುದು ಎಂದರು. 

ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ನೆರವಾಗುತ್ತಿದೆ:

  • ಗೃಹಲಕ್ಷ್ಮಿ ಯೋಜನೆ: ಈ ಯೋಜನೆಯಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 3.78 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ 2,363 ಕೋಟಿ ರೂಪಾಯಿಗಳನ್ನು ನೇರವಾಗಿ ಜಮಾ ಮಾಡಲಾಗಿದೆ.
  • ಅನ್ನಭಾಗ್ಯ ಯೋಜನೆ: ಈ ಯೋಜನೆಯಡಿಯಲ್ಲಿ 3.76 ಲಕ್ಷ ಪಡಿತರ ಕಾರ್ಡುದಾರರಿಗೆ 2,45,290 ಕ್ವಿಂಟಾಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.
  • ಶಕ್ತಿ ಯೋಜನೆ: ಈ ಯೋಜನೆಯಡಿಯಲ್ಲಿ 8.25 ಕೋಟಿ ಮಹಿಳೆಯರು ಪ್ರಯಾಣಿಸಿ ಲಾಭ ಪಡೆದಿದ್ದಾರೆ.
  • ಗೃಹಜ್ಯೋತಿ ಯೋಜನೆ: ಈ ಯೋಜನೆಯಡಿಯಲ್ಲಿ 4.77 ಲಕ್ಷ ಕುಟುಂಬಗಳು ಸೌಲಭ್ಯ ಪಡೆಯುತ್ತಿದ್ದು, ವಿದ್ಯುತ್ ಸಬ್ಸಿಡಿಗಾಗಿ ಸರ್ಕಾರ 752 ಕೋಟಿ ರೂಪಾಯಿ ವೆಚ್ಚ ಮಾಡಿದೆ.
  • ಯುವನಿಧಿ ಯೋಜನೆ: ಈ ಯೋಜನೆಯಡಿಯಲ್ಲಿ 12,969 ವಿದ್ಯಾರ್ಥಿಗಳಿಗೆ 36 ಕೋಟಿ ರೂಪಾಯಿಗಳನ್ನು ಖಾತೆಗೆ ಜಮಾ ಮಾಡಲಾಗಿದೆ.
  • ​ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯೂ ಇದೆ.

​ರೈತರ ಹಿತರಕ್ಷಣೆ ಕಾಪಾಡಲು ಮುಖ್ಯಮಂತ್ರಿಗಳು 'ರೈತ ಚೈತನ್ಯ' ಹಾಗೂ 'ರೈತ ಮಿತ್ರ' ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಮುಂಗಾರು ಮಳೆಯ ಏರುಪೇರು ಮತ್ತು ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು, ಬೆಳೆಹಾನಿಗೆ ತ್ವರಿತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

​ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ವಿಶೇಷ ಆದ್ಯತೆಯನ್ನು ನೀಡಿದೆ. ರಾಜ್ಯದಲ್ಲಿ ಈಗಾಗಲೇ 1,000 KPS ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಹಂತದಲ್ಲಿ ಇನ್ನು 1,000ಕ್ಕೂ ಹೆಚ್ಚು KPS ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ರಾಜ್ಯ ಮಟ್ಟದ KPS ಉದ್ಘಾಟನೆ ಕಾರ್ಯಕ್ರಮ ಇದೇ ಶಿವಮೊಗ್ಗ ಜಿಲ್ಲೆಯಲ್ಲಿ ಆಯೋಜಿಸುವ ಉದ್ದೇಶವಿದೆ.

​ಜಿಲ್ಲೆಯಲ್ಲಿ LKGಯಿಂದ ದ್ವಿತೀಯ PUCಯವರೆಗೆ ಒಂದೇ ಸೂರಿನಡಿಯಲ್ಲಿ ಶಿಕ್ಷಣ ನೀಡುವ 11 KPS ಶಾಲೆಗಳು ನಡೆಯುತ್ತಿವೆ. ಈ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ 59 KPS ಶಾಲೆಗಳು ಜಿಲ್ಲೆಗೆ ಮಂಜೂರು ಮಾಡಲಾಗಿದೆ. 222 ಸರ್ಕಾರಿ ಶಾಲೆಗಳಲ್ಲಿ ಪೂರ್ವಾಪ್ರಾಥಮಿಕ ಶಾಲೆಗಳು ನಡೆಯುತ್ತಿವೆ. ಶಾಲಾ ಕೊಠಡಿಗಳ ದುರಸ್ತಿಗೆ 319 ಲಕ್ಷ ರೂಪಾಯಿ ಮತ್ತು ನೂತನ ಕೊಠಡಿಗಳಿಗೆ 1,180 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ.

​ರಾಜ್ಯದಲ್ಲಿ ಈ ಬಾರಿ SSLC ಮತ್ತು PUCಯಲ್ಲಿ ದೇಶದಲ್ಲೇ ಐತಿಹಾಸಿಕ ಫಲಿತಾಂಶ ನನ್ನ ಅವಧಿಯಲ್ಲಿ ದಾಖಲಾಗಿದೆ. ರಾಜ್ಯದಲ್ಲಿ SSLC ಪರೀಕ್ಷೆಯಲ್ಲಿ ಶೇಕಡಾ 98.08 ಮತ್ತು PUCಯಲ್ಲಿ 92.25 ಶೇಕಡಾವಾರು ಫಲಿತಾಂಶ ದಾಖಲಾಗಿದೆ. SSLC ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 95.5 ಫಲಿತಾಂಶ ದಾಖಲಾಗಿದ್ದು, ಹಿಂದಿಗಿಂತ 14 ರಷ್ಟು ಶೇಕಡಾ ಏರಿಕೆಯಾಗಿದೆ ಎಂದು ತಿಳಿಸಲು ಹೆಮ್ಮೆಪಡುತ್ತೇನೆ. ದ್ವಿತೀಯ PUC ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆಗೆ ಇದೇ ಮೊದಲ ಬಾರಿಗೆ ಸರ್ಕಾರ ಆದೇಶ ಮಾಡಿದೆ ಎಂದರು. 

ಕಾರ್ಯಕ್ರಮದಲ್ಲಿ ಶಾಸಕ ಚನ್ನಬಸಪ್ಪ, ಎಂಎಲ್ ಸಿಗಳಾದ ಡಾ.ಧನಂಜಯ ಸರ್ಜಿ, ಡಿ.ಎಸ್.ಅರುಣ, ಬಲ್ಕಿಸ್ ಬಾನು, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ನಿಖಿಲ್ ಬಿ, ಸಿಇಒ ಹೇಮಂತ್ ಕುಮಾರ್, ಅಡಿಷನಲ್ ಎಸ್ಪಿ ಕಾರ್ಯಪ್ಪ,  ಮೊದಲಾದವರು ಉಪಸ್ಥಿತರಿಧದರು.

80th Independence Day celebrated meaningfully in Shivamogga; flag hoisting held in the presence of 18,000 school children

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close