ವಿಜೃಂಭಣೆಯಿಂದ ಆರಂಭಗೊಂಡ ಈದ್ ಮಿಲಾದ್ ಮೆರವಣಿಗೆ: ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್-Eid Milad procession begins with great fanfare; tight police security in Shivamogga

 SUDDILIVE || SHIV

ವಿಜೃಂಭಣೆಯಿಂದ ಆರಂಭಗೊಂಡ ಈದ್ ಮಿಲಾದ್ ಮೆರವಣಿಗೆ: ಶಿವಮೊಗ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್-Eid Milad procession begins with great fanfare; tight police security in Shivamogga   
Eid, milad


ಶಿವಮೊಗ್ಗ:
ಮಹಮ್ಮದ್ ಪೈಗಂಬರರ ಜನ್ಮದಿನದ ಅಂಗವಾಗಿ ಆಚರಿಸಲಾಗುತ್ತಿರುವ ಈದ್ ಮಿಲಾದ್ ಹಬ್ಬದ ಸಂಭ್ರಮ ಶಿವಮೊಗ್ಗ ನಗರದಲ್ಲಿ ಮುಗಿಲು ಮುಟ್ಟಿದ್ದು, ಬುಧವಾರ ಸಂಜೆ ನಗರದಾದ್ಯಂತ ಅದ್ದೂರಿ ಮೆರವಣಿಗೆ ಆರಂಭಗೊಂಡಿದೆ.

ನಗರದ ವಿವಿಧ ಬಡಾವಣೆಗಳು ಹಾಗೂ ಪ್ರಮುಖ ಪ್ರದೇಶಗಳಿಂದ ಸಾವಿರಾರು ಮುಸ್ಲಿಂ ಬಾಂಧವರು ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಗಾಂಧಿ ಬಜಾರಿನಲ್ಲಿರುವ ಪ್ರಸಿದ್ಧ ಜಾಮಿಯಾ ಮಸೀದಿಯಿಂದ ಪ್ರಮುಖ ಮೆರವಣಿಗೆ ಆರಂಭವಾಗಿದ್ದು, ವಿವಿಧ ಪ್ರದೇಶಗಳಿಂದ ಜನರು ಮೆರವಣಿಗೆಯ ಮೂಲಕ ಜಾಮಿಯಾ ಮಸೀದಿಯತ್ತ ಆಗಮಿಸುತ್ತಿದ್ದಾರೆ.

ಮೆರವಣಿಗೆ ಸಾಗುವ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳು ಹಸಿರು ಬಾವುಟಗಳು, ಬಂಟಿಂಗ್ಸ್‌ಗಳು ಮತ್ತು ಬೃಹತ್ ಕಟೌಟ್‌ಗಳಿಂದ ಅಲಂಕರಿಸಲ್ಪಟ್ಟಿದ್ದು, ನಗರದಾದ್ಯಂತ ಹಬ್ಬದ ಸಂಭ್ರಮ ಕಳೆಗಟ್ಟಿದೆ.

ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳ ಮೂಲಕ ಸಾಗಲಿದ್ದು, ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

3 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಈದ್ ಮಿಲಾದ್ ಮೆರವಣಿಗೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ 3,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ನಿಗಾ ಇರಿಸಲಾಗಿದ್ದು, ಹಗಲು-ರಾತ್ರಿ ಕಣ್ಗಾವಲುಗಾಗಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.

ಮೆರವಣಿಗೆಯ ಸಂದರ್ಭದಲ್ಲಿ ಸಂಚಾರ ವ್ಯವಸ್ಥೆ ಸುಗಮವಾಗಿರುವಂತೆ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖ ವೃತ್ತಗಳು ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಬಿಗಿಗೊಳಿಸಲಾಗಿದೆ.

ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯೊಂದಿಗೆ ಆಚರಿಸುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಕರೆ ನೀಡಿದ್ದು, ನಗರದಾದ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

Eid Milad procession begins with great fanfare; tight police security in Shivamogga

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close