ಗಾಂಧಿ ಬಜಾರ್‌ನಲ್ಲಿ ಪಾಲಿಕೆ ಆರೋಗ್ಯ ವಿಭಾಗದ ದಿಢೀರ್ ದಾಳಿ; ನಿಷೇಧಿತ ಪ್ಲಾಸ್ಟಿಕ್ ವಶ, ₹20 ಸಾವಿರ ದಂಡ-Surprise raid by the City Corporation's health department in Gandhi Bazaar; banned plastic seized, ₹20,000 fine imposed

 SUDDILIVE || SHIVAMOGGA

ಗಾಂಧಿ ಬಜಾರ್‌ನಲ್ಲಿ ಪಾಲಿಕೆ ಆರೋಗ್ಯ ವಿಭಾಗದ ದಿಢೀರ್ ದಾಳಿ; ನಿಷೇಧಿತ ಪ್ಲಾಸ್ಟಿಕ್ ವಶ, ₹20 ಸಾವಿರ ದಂಡ-Surprise raid by the City Corporation's health department in Gandhi Bazaar; banned plastic seized, ₹20,000 fine imposed    
Surprise, raid



ಶಿವಮೊಗ್ಗ:
ನಗರದ ಗಾಂಧಿ ಬಜಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ವಿರುದ್ಧ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸೋಮವಾರ ದಿಢೀರ್ ಕಾರ್ಯಾಚರಣೆ ನಡೆಸಿದರು.

ಮಹಾನಗರ ಪಾಲಿಕೆ ಆಯುಕ್ತರ ನಿರ್ದೇಶನದ ಮೇರೆಗೆ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದು, ಕ್ಯಾರಿ ಬ್ಯಾಗ್ ಸೇರಿದಂತೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಹಾಗೂ ಸಂಗ್ರಹ ಮಾಡುತ್ತಿದ್ದ ಅಂಗಡಿಗಳು ಮತ್ತು ವಿತರಕರ ಮೇಲೆ ತಪಾಸಣೆ ನಡೆಸಿದರು.

ಕಾರ್ಯಾಚರಣೆ ವೇಳೆ ಸುಮಾರು ನಾಲ್ಕೈದು ಅಂಗಡಿಗಳು ಹಾಗೂ ಸಣ್ಣಪುಟ್ಟ ಮಾರಾಟಗಾರರ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿಯಮ ಉಲ್ಲಂಘಿಸಿದವರಿಂದ ಒಟ್ಟು ₹20,000 ದಂಡವನ್ನು ವಸೂಲಿ ಮಾಡಲಾಗಿದೆ.

ಮನೆಯಲ್ಲೇ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹ

ಕಾರ್ಯಾಚರಣೆಯ ವೇಳೆ ಕೆಲವರು ಅಂಗಡಿಗಳಲ್ಲಿ ಮಾತ್ರವಲ್ಲದೆ ಮನೆಗಳಲ್ಲಿಯೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಕಲ್ಲೂರೇನ್ ಬೀದಿಯಲ್ಲಿರುವ ಮನೆಯೊಂದರಲ್ಲೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಮಾಹಿತಿ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಗಿದೆ.

ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಏಜೆನ್ಸಿಗಳು ಹಾಗೂ ಡಿಸ್ಟ್ರಿಬ್ಯೂಟರ್‌ಗಳ ಮೇಲೂ ಪಾಲಿಕೆ ಅಧಿಕಾರಿಗಳು ಗಮನ ಹರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ‘ಪಟೇಲ್ ಪ್ಲಾಸ್ಟಿಕ್ಸ್’ ಸೇರಿದಂತೆ ಕೆಲವು ಸ್ಥಳಗಳನ್ನು ಪರಿಶೀಲಿಸಲಾಗಿದೆ. ಹೆಸರಿಲ್ಲದ ಸ್ಥಳವೊಂದರಲ್ಲಿ ಮನೆಯೊಳಗೆ ಪ್ಲಾಸ್ಟಿಕ್ ವಸ್ತುಗಳನ್ನು ಸ್ಟಾಕ್ ಮಾಡಿರುವುದು ಪತ್ತೆಯಾಗಿರುವುದಾಗಿ ಅಧಿಕಾರಿಗಳ ಮಾಹಿತಿ ತಿಳಿಸಿದೆ.

ಇದರ ಜೊತೆಗೆ ಗಾಂಧಿ ಬಜಾರ್ ಸುತ್ತಮುತ್ತಲಿನ ಬೀದಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದವರ ಮೇಲೂ ತಪಾಸಣೆ ನಡೆಸಿ, ನಿಯಮಾನುಸಾರ ದಂಡ ವಿಧಿಸಲಾಗಿದೆ.


ಮುಂದುವರಿಯಲಿದೆ ತಪಾಸಣೆ

ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮಹಾನಗರ ಪಾಲಿಕೆ ಆರೋಗ್ಯ ವಿಭಾಗವು ದಿಢೀರ್ ತಪಾಸಣೆಗಳನ್ನು ನಡೆಸುತ್ತಿದೆ. ಅಂಗಡಿ, ಏಜೆನ್ಸಿ, ಡಿಸ್ಟ್ರಿಬ್ಯೂಟರ್‌ಗಳ ಜತೆಗೆ ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿರುವ ನಿಷೇಧಿತ ಪ್ಲಾಸ್ಟಿಕ್ ಮೇಲೂ ನಿಗಾ ಇರಿಸಲಾಗುತ್ತಿದೆ.

ಕಾರ್ಯಾಚರಣೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಆರೋಗ್ಯ ನಿರೀಕ್ಷಕರು ಹಾಗೂ ಪೌರ ಕಾರ್ಮಿಕ ಸಿಬ್ಬಂದಿ ಭಾಗವಹಿಸಿದ್ದರು.

ನಿಷೇಧಿತ ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಹಾನಿಕಾರಕವಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಪಾಲಿಕೆ ನಿಯಮಗಳನ್ನು ಪಾಲಿಸಿ ಪರ್ಯಾಯ ಪರಿಸರ ಸ್ನೇಹಿ ಚೀಲಗಳನ್ನು ಬಳಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿಯೂ ಇಂತಹ ದಿಢೀರ್ ಕಾರ್ಯಾಚರಣೆಗಳನ್ನು ಮುಂದುವರಿಸುವ ಸಾಧ್ಯತೆ ಇದೆ.

Surprise raid by the City Corporation's health department in Gandhi Bazaar; banned plastic seized, ₹20,000 fine imposed

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close