ಶಿವಮೊಗ್ಗ ಅಂಚೆ ವಿಭಾಗದಲ್ಲಿ 55 ಗ್ರಾಮೀಣ ಅಂಚೆ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ- Applications invited for 55 Gramin Dak Sevak posts in the Shivamogga Postal Division

 SUDDILIVE || SHIVAMOGGA

ಶಿವಮೊಗ್ಗ ಅಂಚೆ ವಿಭಾಗದಲ್ಲಿ 55 ಗ್ರಾಮೀಣ ಅಂಚೆ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ- Applications invited for 55 Gramin Dak Sevak posts in the Shivamogga Postal Division  Post, office


ಶಿವಮೊಗ್ಗ:
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ (BPM), ಸಹಾಯಕ ಶಾಖಾ ಅಂಚೆ ಪಾಲಕ (ABPM) ಹಾಗೂ ಡಾಕ್ ಸೇವಕ್ (GDS) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಅಂಚೆ ವಿಭಾಗದಲ್ಲಿ ಒಟ್ಟು 55 ಹುದ್ದೆಗಳು ಖಾಲಿ ಇದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕನಿಷ್ಠ ತೇರ್ಗಡೆ ಅಂಕಗಳನ್ನು ಪಡೆದಿರಬೇಕು. ಜೊತೆಗೆ, 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಅಧ್ಯಯನ ಮಾಡಿರುವುದು ಕಡ್ಡಾಯವಾಗಿದೆ.

ಅಭ್ಯರ್ಥಿಗಳ ವಯಸ್ಸು 18ರಿಂದ 40 ವರ್ಷದೊಳಗಿರಬೇಕು. ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

10ನೇ ತರಗತಿ ಅಂಕಗಳ ಆಧಾರದ ಮೇಲೆ ಆಯ್ಕೆ

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ 10ನೇ ತರಗತಿಯ ಅಂಕಗಳ ಆಧಾರದ ಮೇಲೆ ಆನ್‌ಲೈನ್ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪ್ರತ್ಯೇಕ ಲಿಖಿತ ಪರೀಕ್ಷೆ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21 ಸೆಪ್ಟೆಂಬರ್ 2026

ಅರ್ಜಿ ತಿದ್ದುಪಡಿ ಹಾಗೂ ಶುಲ್ಕ ಪಾವತಿಗೆ ಸೆಪ್ಟೆಂಬರ್ 23ರಿಂದ 24, 2026ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಮೂಲಕವೇ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು. ಸಂಪರ್ಕ ಸಂಖ್ಯೆ: 08182-222835 / 08182-222516.

ಈ ಕುರಿತು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Applications invited for 55 Gramin Dak Sevak posts in the Shivamogga Postal Division  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close