ಶಿವಮೊಗ್ಗ ಲೋಕಾಯುಕ್ತ ನೂತನ ಎಸ್‌ಪಿಯಾಗಿ ಆಂಟನಿ ಜಾನ್ ಅಧಿಕಾರ ಸ್ವೀಕಾರ- Antony John takes charge as the new SP of Shivamogga Lokayukta

SUDDILIVE || SHIVAMOGGA

ಶಿವಮೊಗ್ಗ ಲೋಕಾಯುಕ್ತ ನೂತನ ಎಸ್‌ಪಿಯಾಗಿ ಆಂಟನಿ ಜಾನ್ ಅಧಿಕಾರ ಸ್ವೀಕಾರ-  Antony John takes charge as the new SP of Shivamogga Lokayukta 

Likayukta, sp




ಶಿವಮೊಗ್ಗ: ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆಂಟನಿ ಜಾನ್ ಜೆ.ಕೆ. ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಇದುವರೆಗೆ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಎಸ್. ಕೌಲಾಪೂರೆ ಅವರ ವರ್ಗಾವಣೆಯ ನಂತರ, ಸರ್ಕಾರವು ಆಂಟನಿ ಜಾನ್ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಅಧಿಕಾರ ಸ್ವೀಕರಿಸಿದ ತಕ್ಷಣ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಅಭಯ ನೀಡಿರುವ ನೂತನ ಎಸ್‌ಪಿ, ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಅಕ್ರಮ ಹಾಗೂ ಭ್ರಷ್ಟಾಚಾರದ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಭ್ರಷ್ಟಾಚಾರ ಕಂಡರೆ ನೇರ ದೂರು ನೀಡಿ ಸಾರ್ವಜನಿಕ ಕೆಲಸ-ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುವುದು, ಅನಗತ್ಯ ವಿಳಂಬ ಧೋರಣೆ ತೋರುವುದು, ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ದುರುಪಯೋಗ ಎಸಗುವುದು ಕಂಡುಬಂದಲ್ಲಿ ಸಾರ್ವಜನಿಕರು ಸೂಕ್ತ ಆಧಾರಗಳೊಂದಿಗೆ ಲೋಕಾಯುಕ್ತಕ್ಕೆ ದೂರು ನೀಡಬಹುದು.

ಸಾರ್ವಜನಿಕರು ತಮ್ಮ ದೂರುಗಳು, ವಿಚಾರಣೆ ಸ್ಥಿತಿ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಲೋಕಾಯುಕ್ತ ಎಸ್‌ಪಿ ಅವರ ನೇರ ಮೊಬೈಲ್ ಸಂಖ್ಯೆಯನ್ನು ಪ್ರಕಟಿಸಲಾಗಿದೆ.

  • ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ: 93640-62525
Antony John takes charge as the new SP of Shivamogga Lokayukta 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close