SUDDILIVE || SHIVAMOGGA
ಬಿ.ಎಚ್. ಗಿರೀಶ್ ಅವರಿಗೆ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿ- B.H. Girish gets state-level ‘Best Teacher’ award
ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣದ ಶ್ರೀ ಹುಚ್ಚರಾಯಸ್ವಾಮಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಶಿಕಾರಿಪುರ ತಾಲ್ಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಎಚ್. ಗಿರೀಶ್ ಅವರು 2026-27ನೇ ಸಾಲಿನ ರಾಜ್ಯ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಗಿರೀಶ್ ಅವರ ಶೈಕ್ಷಣಿಕ, ಸಾಮಾಜಿಕ ಹಾಗೂ ಸಂಘಟನಾತ್ಮಕ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 27ರಂದು ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಬಿ.ಎಚ್. ಗಿರೀಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಂಘಟನಾತ್ಮಕ ಚಟುವಟಿಕೆಗಳಿಗಾಗಿ ದೊರೆತಿರುವ ಈ ಗೌರವಕ್ಕೆ ಶಿಕ್ಷಣ ವಲಯದ ಗಣ್ಯರು, ಶಿಕ್ಷಕರು ಹಾಗೂ ಗಿರೀಶ್ ಅವರ ಹಿತೈಷಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
