11 ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹15 ಸಾವಿರ ದಂಡ-Crime case against 11-year-old girl: Accused gets 5 years in jail, ₹15,000 fine

 SUDDILIVE || SHIVAMOGGA

11 ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹15 ಸಾವಿರ ದಂಡ-Crime case against 11-year-old girl: Accused gets 5 years in jail, ₹15,000 fine
Crime, case


ಶಿವಮೊಗ್ಗ:
ಭದ್ರಾವತಿ ತಾಲ್ಲೂಕಿನಲ್ಲಿ 11 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 49 ವರ್ಷದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿದೆ.

2024ರಲ್ಲಿ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಶ್ರೀಮತಿ ಕವಿತಾ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1)ದಲ್ಲಿ ನಡೆದಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀ ಶ್ರೀಧರ್ ಅವರು ವಾದ ಮಂಡಿಸಿದ್ದರು.

ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹15,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ ₹50,000 ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

Crime case against 11-year-old girl: Accused gets 5 years in jail, ₹15,000 fine

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close