ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕರ ಪ್ರವೇಶಕ್ಕೆ ಪುನರಾರಂಭ-From September 26, Sakrebailu Elephant Sanctuary will be open to the public again

 SUDDILIVE || SHIVAMOGGA

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕರ ಪ್ರವೇಶಕ್ಕೆ ಪುನರಾರಂಭ-From September 26, Sakrebailu Elephant Sanctuary will be open to the public again    
Sakrebailu, elephant




ಶಿವಮೊಗ್ಗ: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದ ಶಿವಮೊಗ್ಗದ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರ ಸೆಪ್ಟೆಂಬರ್ 26ರಿಂದ ಸಾರ್ವಜನಿಕರ ಪ್ರವೇಶಕ್ಕೆ ಪುನರಾರಂಭವಾಗಲಿದೆ.

ಏಪ್ರಿಲ್ 18, 2026ರಂದು ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಅರಣ್ಯ ಸಚಿವರು ಸೂಚಿಸಿದ್ದರು. ಪ್ರವಾಸಿಗರ ಸುರಕ್ಷತೆಗಾಗಿ ಅಗತ್ಯ ಸುರಕ್ಷತಾ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಅಳವಡಿಸಿಕೊಂಡ ಬಳಿಕವೇ ಶಿಬಿರಗಳನ್ನು ಪುನರಾರಂಭಿಸುವಂತೆ ನಿರ್ದೇಶನ ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೂಚಿಸಿರುವ ಸುರಕ್ಷತಾ ಮಾರ್ಗಸೂಚಿಗಳಂತೆ ಸಕ್ರೆಬೈಲು ಆನೆ ಬಿಡಾರದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಾರ್ವಜನಿಕರು ಹಾಗೂ ಆನೆಗಳಿಗೆ ಪ್ರತ್ಯೇಕ ಮಾರ್ಗ ಕಲ್ಪಿಸಲಾಗಿದ್ದು, ಪ್ರವಾಸಿಗರು ಮತ್ತು ಆನೆಗಳ ನಡುವೆ ನೇರ ಸಂಪರ್ಕ ಉಂಟಾಗದಂತೆ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಿಗರ ಮಾಹಿತಿ ಹಾಗೂ ಜಾಗೃತಿಗಾಗಿ ಅಗತ್ಯ ಸೂಚನಾ ಫಲಕಗಳನ್ನು ಸಹ ಅಳವಡಿಸಲಾಗಿದೆ.

ಸಕ್ರೆಬೈಲು ಆನೆ ಬಿಡಾರದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 26, 2026ರಿಂದ ಸಾರ್ವಜನಿಕರ ಪ್ರವೇಶಕ್ಕೆ ಅಧಿಕೃತವಾಗಿ ಪುನರಾರಂಭಿಸಲಾಗುವುದು ಎಂದು ಅರಣ್ಯ ಇಲಾಖೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

From September 26, Sakrebailu Elephant Sanctuary will be open to the public again   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close