ಸೆ.29 ಮತ್ತು 30 ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-Power outage in many areas of Shivamogga on September 29 and 30

 SUDDILIVE || SHIVAMOGGA

ಸೆ.29 ಮತ್ತು 30 ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-Power outage in many areas of Shivamogga on September 29 and 30
Power, outage


ಶಿವಮೊಗ್ಗ:
ನಗರದ ವಿವಿಧ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರಂದು ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಮೊದಲಿಗೆ ಸೆ.29ರಂದು ವಿದ್ಯುತ್ ವ್ಯತ್ಯಯ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ನಿರ್ವಹಣಾ ಕಾಮಗಾರಿಯನ್ನು ಸೆ.30ಕ್ಕೆ ಮುಂದೂಡಲಾಗಿದೆ.

ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ತ್ಯಾವರೆಚಟ್ನಹಳ್ಳಿಯ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕುವೆಂಪು ನಗರ, ಎನ್.ಇ.ಎಸ್. ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಸೂಡಾ ಬಡಾವಣೆ, ಜೆಎನ್‌ಎನ್‌ಸಿ ಕಾಲೇಜು, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ–ಹೆಚ್ ಬ್ಲಾಕ್, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ರಾಯಲ್ ಬಡಾವಣೆ, ರಾಗಿಗುಡ್ಡ, ವಡ್ಡರಹಟ್ಟಿ, ಸವಳಂಗ ರಸ್ತೆ, ತ್ಯಾವರೆಚಟ್ನಹಳ್ಳಿ, ಶೇಷಾದ್ರಿಪುರಂ, ತ್ರಿಮೂರ್ತಿ ನಗರ, ನವುಲೆ, ಅಶ್ವತ್ಥ ನಗರ, ಎಲ್‌ಬಿಎಸ್ ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ಡಾಲರ್ಸ್ ಕಾಲೋನಿ, ಮಲ್ಲೇಶ್ವರನಗರ, ಶಂಕರಮಠ ರಸ್ತೆ, ಶಂಕರ ಕಾಲೋನಿ, ಮಲ್ಲಿಕಾರ್ಜುನ ನಗರ, ರಾಮಾರಾವ್ ಲೇಔಟ್, ನ್ಯಾಷನಲ್ ಪಬ್ಲಿಕ್ ಶಾಲೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದೇ ವೇಳೆ, ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣ ಕೇಂದ್ರದ 66 ಕೆ.ವಿ. ಎಂಜಿ-1 ಬಿಸಿ ಯುನಿಟ್‌ನಲ್ಲಿ ನಡೆಯಬೇಕಿದ್ದ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯೂ ಕಾರಣಾಂತರಗಳಿಂದ ಸೆ.30ರಂದು ನಡೆಯಲಿದೆ.

ಈ ಕಾಮಗಾರಿಯಿಂದ ಬೆಳಿಗ್ಗೆ 9ರಿಂದ ಸಂಜೆ 4.30ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಜಲ್ಲಿ ಕ್ರಷರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಮೆಸ್ಕಾಂ ಇಲಾಖೆಯೊಂದಿಗೆ ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಸೆ. 29 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಸೆ.28( ಕರ್ನಾಟಕ ವಾರ್ತೆ):220 ಕೆವಿ ಎಂಆರ್‌ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬೇ ಯ ತ್ರೈಮಾಸಿಕ ನಿರ್ವಹಣಾ ಕೆಲಸವಿರುವುದರಿಂದ ಸೆ.29 ರಂದು ಬೆಳಿಗ್ಗೆ 09:30 ರಿಂದ ಸಂಜೆ 05:30 ರವರೆಗೆ ಹೊಳೆಹೊನ್ನೂರು ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಳೆಹೊನ್ನೂರು, ನಾಗತಿಬೆಳಗಲು, ದಾಸರಕಲ್ಲಹಳ್ಳಿ, ಕೆ. ಕೆ.ಮಗ್ಗೆ, ಯಡೇಹಳ್ಳಿ, ಅರಹತೊಳಲು, ಎಸ್.ಕೆ.ಮಗ್ಗೆ, ಸಿದ್ಲಿಪುರ, ಹನುಮಂತಾಪುರ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮತ್ತು ರೈತರುಗಳು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Power outage in many areas of Shivamogga on September 30    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close