ಸುಂದರೇಶ್ ವಿಚಾರದಲ್ಲಿ ವೈಯಕ್ತಿಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ: ಕಾಂಗ್ರೆಸ್ ನಾಯಕ-Will not respond to personal statements on Sundaresh issue: Congress leader

 SUDDILIVE || SHIVAMOGGA

ಸುಂದರೇಶ್ ವಿಚಾರದಲ್ಲಿ ವೈಯಕ್ತಿಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ: ಕಾಂಗ್ರೆಸ್ ನಾಯಕ-Will not respond to personal statements on Sundaresh issue: Congress leader    

Bhandari, manjunath



ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಅವರ ಇತ್ತೀಚಿನ ಹೇಳಿಕೆಗಳ ಕುರಿತು ವೈಯಕ್ತಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂದರೇಶ್ ಅವರು ತಮ್ಮ ಕ್ಲಾಸ್‌ಮೇಟ್ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿದ ನಾಯಕರಾಗಿದ್ದಾರೆ. ಯುವ ಕಾಂಗ್ರೆಸ್‌ನಲ್ಲಿದ್ದ ಅವಧಿಯಿಂದಲೂ ಅವರ ಸೇವೆಯನ್ನು ಪಕ್ಷ ಗುರುತಿಸಿದೆ. ಪಕ್ಷದಲ್ಲಿ ದುಡಿದವರಿಗೆ ವಿವಿಧ ಹುದ್ದೆ ಮತ್ತು ಜವಾಬ್ದಾರಿಗಳನ್ನು ನೀಡುವುದು ಕಾಂಗ್ರೆಸ್‌ನ ಧೋರಣೆಯಾಗಿದೆ ಎಂದು ಹೇಳಿದರು.

ಸುಂದರೇಶ್ ಅವರು ಯುವ ಕಾಂಗ್ರೆಸ್‌ನಲ್ಲಿ ಕಾರ್ಯನಿರ್ವಹಿಸಿದ್ದ ಸಂದರ್ಭದಲ್ಲಿ ಅವರ ಸೇವೆಯನ್ನು ಗುರುತಿಸಿ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿತ್ತು. ಬಳಿಕ ಕೆಡಿಎ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ನಂತರ ಸೂಡಾ ಅಧ್ಯಕ್ಷರ ಜವಾಬ್ದಾರಿಯನ್ನೂ ಪಕ್ಷ ನೀಡಿತ್ತು ಎಂದು ಅವರು ವಿವರಿಸಿದರು.

ಆದರೆ, ಸುಂದರೇಶ್ ಅವರ ವೈಯಕ್ತಿಕ ಹೇಳಿಕೆಗಳ ಬಗ್ಗೆ ತಾವು ಯಾವುದೇ ಕಮೆಂಟ್ ಮಾಡಲು ಹೋಗುವುದಿಲ್ಲ. ಅವರು ತಮ್ಮ ಮಿತ್ರರಾಗಿದ್ದು, ಕಾಂಗ್ರೆಸ್ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಸುಂದರೇಶ್ ಅವರ ವಿರುದ್ಧ ಪಕ್ಷದ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮದ ಕುರಿತು ಮಾತನಾಡಿದ ಅವರು, ಈ ವಿಚಾರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಗಮನಕ್ಕೆ ಬಿಡಲಾಗಿದೆ. ಜಿಲ್ಲಾ ಅಧ್ಯಕ್ಷರು ಈಗಾಗಲೇ ಪಕ್ಷದ ವರಿಷ್ಠರ ಗಮನಕ್ಕೆ ವಿಷಯವನ್ನು ತಂದಿದ್ದಾರೆ. ವರಿಷ್ಠರಿಂದ ಸುಂದರೇಶ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಅದಕ್ಕೆ ಅವರು ಉತ್ತರಿಸಿದ ಬಳಿಕ ಕಾಂಗ್ರೆಸ್ ಪಕ್ಷ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

ಶಿಕಾರಿಪುರದಲ್ಲಿ ಭಾರತ್ ಜೋಡೋ ಕಾರ್ಯಕ್ರಮ

ಶಿಕಾರಿಪುರದಲ್ಲಿ ನಡೆಯಲಿರುವ ಭಾರತ್ ಜೋಡೋ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಕಾರ್ಯಕ್ರಮದ ರೂಪುರೇಷೆಯನ್ನು ಜಿಲ್ಲಾ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು. ಪ್ರತಿ ಬೂತ್‌ಗೂ ಭೇಟಿ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದ್ದು, ಎಷ್ಟು ದಿನ ಕಾರ್ಯಕ್ರಮ ನಡೆಸಬೇಕು ಎಂಬುದನ್ನು ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

Will not respond to personal statements on Sundaresh issue: Congress leader    

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close