SUDDILIVE || SHIVAMOGGA
ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೇಶ್‌ಗೆ ಶುಭಾಶಯ: ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ- Congratulations to the new District Congress President H.C. Yogesh: Garland laid at the statue of Basavanna
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಎಚ್.ಸಿ. ಯೋಗೇಶ್ ಅವರನ್ನು ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ ಎಚ್.ಸಿ. ಯೋಗೇಶ್ ಅವರು ಮಾಲಾರ್ಪಣೆ ಮಾಡಿದರು. ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯಗಳನ್ನು ಕೋರಲಾಯಿತು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಹೆಗ್ಡೆ, ಎಸ್.ಪಿ. ದಿನೇಶ್, ಕಾಶಿ ವಿಶ್ವನಾಥ್, ಯಮುನಾ ರಂಗೇಗೌಡ, ಸೈಯದ್, ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಜವಳಿ ನಿಗಮದ ಅಧ್ಯಕ್ಷ ಚೇತನ್, ಮುಖಂಡರಾದ ಚಿರಂಜೀವಿ ಬಾಬು, ಮಧುಸೂದನ್, ಗಿರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
NSUI ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ಕಾಟಿಕೆರೆ ರವಿ, ನಗರಾಧ್ಯಕ್ಷ ರವಿಕುಮಾರ್, ಚಂದ್ರೋಜಿರಾವ್ ಸುಭಾನ, ಫಾರಾಜ್, ಆದಿತ್ಯ, ಶ್ರೀಕಾಂತ್, ಪಂಕಜ್ ಹಾಗೂ ಯುವ ಕಾಂಗ್ರೆಸ್ ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತಾರ್, ಆಕಾಶ್, ಮಲಗೊಪ್ಪ ಶಿವು, ಬಾಬು, ತೋಫಿಕ್ ಸೇರಿದಂತೆ ಹಲವು ಯುವ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
