SUDDILIVE || SHIVAMOGGA
ಕೌಟುಂಬಿಕ ಸಮಸ್ಯೆಗೆ ಮನನೊಂದ ಚಾಲಕ ನೇಣಿಗೆ ಶರಣು: ಹೊಸಮನೆ ನಿವಾಸಿ ಮಂಜುನಾಥ್ ಆತ್ಮಹತ್ಯೆ- Driver distressed by family issues hangs himself: Manjunath, a resident of Hosamane, commits suicide
ಶಿವಮೊಗ್ಗ: ಪತ್ನಿಯ ಅಗಲಿಕೆ ಹಾಗೂ ಕೌಟುಂಬಿಕ ಸಮಸ್ಯೆಯಿಂದ ಮನನೊಂದ ಕಾರು ಚಾಲಕರೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ದುಃಖಕರ ಘಟನೆ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ನಗರದ ಹೊಸಮನೆ 5ನೇ ಅಡ್ಡರಸ್ತೆಯ ನಿವಾಸಿ ಮಂಜುನಾಥ್ (45) ಎಂದು ಗುರುತಿಸಲಾಗಿದೆ.
ಮಂಜುನಾಥ್ ಅವರ ಪತ್ನಿ ಕೆಲವು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು ಎನ್ನಲಾಗಿದ್ದು, ಪತ್ನಿಯ ಅಗಲಿಕೆಯಿಂದ ಅವರು ಮಾನಸಿಕವಾಗಿ ತೀವ್ರವಾಗಿ ನೊಂದಿದ್ದರು. ಇದರ ಬೆನ್ನಲ್ಲೇ ಎದುರಾದ ಕೌಟುಂಬಿಕ ಸಮಸ್ಯೆಗಳು ಅವರನ್ನು ಮತ್ತಷ್ಟು ಖಿನ್ನತೆಗೆ ದೂಡಿದ್ದವು ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಮನನೊಂದ ಮಂಜುನಾಥ್ ಅವರು ತಮ್ಮ ಸ್ವಗೃಹದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Driver distressed by family issues hangs himself: Manjunath, a resident of Hosamane, commits suicide
