ಕಸ್ತೂರಿರಂಗನ್ ವಿಚಾರ: ಸೆ.21ಕ್ಕೆ ವಿಶೇಷ ಅಧಿವೇಶನ; ಸೆ.19ರಂದು ತೀರ್ಥಹಳ್ಳಿಗೆ ಡಿಕೆಶಿ ಭೇಟಿ-Kasturirangan issue: Special session on Sept. 21; DK Shi visits Thirthahalli on Sept. 19

 SUDDILIVE || SHIVAMOGGA

ಕಸ್ತೂರಿರಂಗನ್ ವಿಚಾರ: ಸೆ.21ಕ್ಕೆ ವಿಶೇಷ ಅಧಿವೇಶನ; ಸೆ.19ರಂದು ತೀರ್ಥಹಳ್ಳಿಗೆ ಡಿಕೆಶಿ ಭೇಟಿ-Kasturirangan issue: Special session on Sept. 21; DK Shi visits Thirthahalli on Sept. 19    
Kasturirangan, report


ಶಿವಮೊಗ್ಗ:
ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿನ ಪರಿಸರ ಸೂಕ್ಷ್ಮ ಪ್ರದೇಶದ ವಿಚಾರವಾಗಿ ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಸ್ತೂರಿರಂಗನ್ ವಿಚಾರವಾಗಿ ಒಂದು ದಿನದ ವಿಶೇಷ ಅಧಿವೇಶನ ನಡೆಸುವುದಾಗಿ ಈ ಹಿಂದೆ ಹೇಳಿದ್ದರು. ಅದರಂತೆ ಸೆಪ್ಟೆಂಬರ್ 21ರಂದು ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ ಎಂದು ಕಿಮ್ಮನೆ ರತ್ನಾಕರ್ ಮಾಹಿತಿ ನೀಡಿದ್ದಾರೆ.

ವಿಶೇಷ ಅಧಿವೇಶನಕ್ಕೂ ಮುನ್ನ ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಒಳಪಡುವ ಆರು ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಳೀಯರು, ರೈತರು ಹಾಗೂ ವಿವಿಧ ಭಾಗೀದಾರರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸೆ.18ರಂದು ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ

ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಬಳಿಕ ಸೆಪ್ಟೆಂಬರ್ 19ರಂದು ಡಿ.ಕೆ. ಶಿವಕುಮಾರ್ ಅವರು ತೀರ್ಥಹಳ್ಳಿಗೆ ಆಗಮಿಸಲಿದ್ದು, ಕಸ್ತೂರಿರಂಗನ್ ವರದಿ ಕುರಿತು ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ತೀರ್ಥಹಳ್ಳಿಯ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಳಿಕ ಅನಂತಮೂರ್ತಿ ಪಿಯು ಕಾಲೇಜಿನ ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಾಳೆಹೊನ್ನೂರಿಗೂ ಭೇಟಿ

ತೀರ್ಥಹಳ್ಳಿ ಕಾರ್ಯಕ್ರಮದ ಬಳಿಕ ಡಿ.ಕೆ. ಶಿವಕುಮಾರ್ ಅವರು ಬಾಳೆಹೊನ್ನೂರಿಗೆ ತೆರಳಿ ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ.

ಈ ಕಾರ್ಯಕ್ರಮಗಳನ್ನು ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿದೆ ಎಂದು ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸ್ಥಳೀಯ ರೈತರು ಹಾಗೂ ಜನರ ಅಭಿಪ್ರಾಯಗಳನ್ನು ನೇರವಾಗಿ ಆಲಿಸಿ, ಸೆಪ್ಟೆಂಬರ್ 21ರಂದು ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ಈ ವಿಚಾರವನ್ನು ಚರ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.

Kasturirangan issue: Special session on Sept. 21; DK Shi visits Thirthahalli on Sept. 19

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close