ಜಿಂಕೆ ಶಿಕಾರಿ ಮಾಡಿ ಮಾಂಸ ಮಾಡುತ್ತಿದ್ದ ವೇಳೆ ದಾಳಿ: ಆರೋಪಿಗಳ ವಶ-Attack while hunting deer and preparing meat: Accused arrested

 SUDDILIVE || HOSANAGARA

ಜಿಂಕೆ ಶಿಕಾರಿ ಮಾಡಿ ಮಾಂಸ ಮಾಡುತ್ತಿದ್ದ ವೇಳೆ ದಾಳಿ: ಆರೋಪಿಗಳ ವಶ-Attack while hunting deer and preparing meat: Accused arrested 
Deer, meet

  



ಹೊಸನಗರ:
ಜಿಂಕೆಯನ್ನು ಶಿಕಾರಿ ಮಾಡಿ ಮಾಂಸ ಮಾಡುತ್ತಿದ್ದ ಆರೋಪಿಗಳ ಮೇಲೆ ಪೊಲೀಸ್‌ ಅರಣ್ಯ ಸಂಚಾರಿ ದಳ ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ.

ಸೆಪ್ಟೆಂಬರ್ 11ರಂದು ದೊರೆತ ಮಾಹಿತಿ ಆಧರಿಸಿ ಪೊಲೀಸ್‌ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ನೆವಟೂರು ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಜಿಂಕೆ ಶಿಕಾರಿ ಮಾಡಿ ಅದರ ಮಾಂಸವನ್ನು ಮಾಡುತ್ತಿದ್ದ ಆರೋಪಿ ನಿಂಗಪ್ಪ ವಶಕ್ಕೆ ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಓರ್ವ ಆರೋಪಿ ಲಿಂಗಪ್ಪನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸ್‌ ಅರಣ್ಯ ಸಂಚಾರಿ ದಳದ PSI ವಿನಾಯಕ ಅವರ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಜಿಂಕೆ ಶಿಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

Attack while hunting deer and preparing meat: Accused arrested

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close