ಸಾಗರ ಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ: ಮನೆ ಕಳವು ಪ್ರಕರಣ, ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ-Sagara Town Police's swift operation: House burglary case; accused traced within hours.

 SUDDILIVE || SAGARA

ಸಾಗರ ಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ: ಮನೆ ಕಳವು ಪ್ರಕರಣ, ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ-Sagara Town Police's swift operation: House burglary case; accused traced within hours.
Pete, police




ಸಾಗರ: ಮನೆಯ ಗಾಡ್ರೇಜ್‌ನಲ್ಲಿ ಇರಿಸಿದ್ದ ₹2.54 ಲಕ್ಷ ನಗದು ಹಣ ಕಳವು ಮಾಡಿದ್ದ ಆರೋಪಿಯನ್ನು ಸಾಗರ ಪೇಟೆ ಪೊಲೀಸರು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚಿ, ಆತನಿಂದ ₹2,29,900 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಸಾಗರದ ಅಣಲೆಕೊಪ್ಪ ನಿವಾಸಿ ಉಮಾ ಅವರು ಸೆಪ್ಟೆಂಬರ್ 6ರಂದು ತಮ್ಮ ಮನೆಯ ಗಾಡ್ರೇಜ್‌ನಲ್ಲಿ ಇಟ್ಟಿದ್ದ ₹2,54,000 ನಗದು ಹಣ ಕಳುವಾಗಿದೆ ಎಂದು ಸಾಗರ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಮ್ಮ ಮನೆಯಲ್ಲಿ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದ ಪಾಂಡುರಂಗ ಎಂಬಾತ ಹಣವನ್ನು ಕಳವು ಮಾಡಿಕೊಂಡು ಹೋಗಿರುವ ಶಂಕೆ ವ್ಯಕ್ತಪಡಿಸಿದ್ದರು.

ಈ ದೂರಿನ ಆಧಾರದ ಮೇಲೆ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಸಿಆರ್ ನಂ.175/2026ರಂತೆ ಬಿಎನ್‌ಎಸ್ ಕಲಂ 305, 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

ಕೆಲವೇ ಗಂಟೆಗಳಲ್ಲಿ ಆರೋಪಿಯ ಪತ್ತೆ

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕಳುವಾದ ಹಣ ಹಾಗೂ ಆರೋಪಿಯ ಪತ್ತೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಅವರ ಮಾರ್ಗದರ್ಶನದಲ್ಲಿ, ಸಾಗರ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಬೆನಕಪ್ರಸಾದ್ ಎನ್.ಜೆ., ಐಪಿಎಸ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ಸಾಗರ ಪೇಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪುಲ್ಲಯ್ಯ ರಾಥೋಡ್ ಅವರ ನೇತೃತ್ವದಲ್ಲಿ ಪಿಎಸ್‌ಐ ಶಾಂತರಾಜ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಡ್ ಕಾನ್‌ಸ್ಟೆಬಲ್ ವಿಶ್ವನಾಥ್ (ಹೆಚ್‌ಸಿ 101) ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ನರೇಂದ್ರ (ಪಿಸಿ 1472) ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿತು.

ಪ್ರಕರಣ ದಾಖಲಾಗಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿತ **ಪಾಂಡುರಂಗ (35)**ನನ್ನು ಪತ್ತೆಹಚ್ಚಿದ್ದಾರೆ. ಆರೋಪಿಯು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ, ರಾಜಾಪುರ ತಾಲ್ಲೂಕಿನ ಹಾತ್ ಕಾಂಬಾ ಗ್ರಾಮದ ಮೂಲ ನಿವಾಸಿಯಾಗಿದ್ದು, ಸಾಗರದ ಎಸ್.ಎನ್. ನಗರ 3ನೇ ಕ್ರಾಸ್‌ನಲ್ಲಿ ವಾಸವಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ₹2,29,900 ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಕಳುವಾದ ಹಣದ ಬಹುಪಾಲು ವಶಪಡಿಸಿಕೊಂಡ ಸಾಗರ ಪೇಟೆ ಪೊಲೀಸರ ಕಾರ್ಯಾಚರಣೆಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ, ತನಿಖಾ ತಂಡವನ್ನು ಅಭಿನಂದಿಸಿದ್ದಾರೆ.

Sagara Town Police's swift operation: House burglary case; accused traced within hours.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close