ಸಾಗರ ರಸ್ತೆಯಲ್ಲಿ ಬೈಕ್–ಬಸ್ ಡಿಕ್ಕಿ: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗಂಭೀರ ಗಾಯ-Bike-bus collision on Sagar Road: Two students seriously injured

 SUDDILIVE || SHIVAMOGGA

ಸಾಗರ ರಸ್ತೆಯಲ್ಲಿ ಬೈಕ್–ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ-Bike-bus collision on Sagar Road: Two Engineering students seriously injured
Road, accident


ಶಿವಮೊಗ್ಗ:
ನಗರದ ಸಾಗರ ರಸ್ತೆಯ ಫ್ಲೈಓವರ್ ಬಳಿ ಬುಧವಾರ ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದಲ್ಲಿ ಗಾಯಗೊಂಡವರನ್ನು ಮಿಥುನ್(19), ತರುಣ್(19) ಹಾಗೂ ರವೀಂದ್ರ(19) ಎಂದು ಗುರುತಿಸಲಾಗಿದೆ. ಮೂವರು ಪ್ರತಿಷ್ಠಿತ ಕಾಲೇಜಿನ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.

ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ರಸ್ತೆಗೆ ಬಿದ್ದಿದ್ದಾರೆ. ಗಾಯಾಳುಗಳ ಪೈಕಿ ಮಿಥುನ್ ಮತ್ತು ರವೀಂದ್ರ ಅವರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ತುಂಗಾನಗರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Bike-bus collision on Sagar Road: Two students seriously injured

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close