ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕರ ಪ್ರವೇಶಕ್ಕೆ: ಡಿಎಫ್‌ಒ ಪಟೆಗಾರ್ ಭೇಟಿ, ಸುರಕ್ಷತಾ ಕ್ರಮಗಳ ಪರಿಶೀಲನೆ- Sakrebailu Elephant Camp to be open to public from September 26: DFO Pategar visits, reviews safety measures

 SUDDILIVE || SHIVAMOGGA

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕರ ಪ್ರವೇಶಕ್ಕೆ: ಡಿಎಫ್‌ಒ ಪಟೆಗಾರ್ ಭೇಟಿ, ಸುರಕ್ಷತಾ ಕ್ರಮಗಳ ಪರಿಶೀಲನೆ- Sakrebailu Elephant Camp to be open to public from September 26: DFO Pategar visits, reviews safety measures   
Sakrebailu, elephant

Sakrebailu, elephant


ಶಿವಮೊಗ್ಗ: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದ ಶಿವಮೊಗ್ಗದ ಪ್ರಸಿದ್ಧ ಸಕ್ರೆಬೈಲು ಆನೆ ಬಿಡಾರ ಸೆಪ್ಟೆಂಬರ್ 26ರಿಂದ ಸಾರ್ವಜನಿಕರ ಪ್ರವೇಶಕ್ಕೆ ಪುನರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಡಿಎಫ್‌ಒ ಪ್ರಸನ್ನ ಕುಮಾರ್ ಪಟೆಗಾರ್ ಅವರು ಶುಕ್ರವಾರ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿ ಕೈಗೊಳ್ಳಲಾಗಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.

ಏಪ್ರಿಲ್ 18, 2026ರಂದು ದುಬಾರೆ ಆನೆ ಶಿಬಿರದಲ್ಲಿ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದ ಎಲ್ಲಾ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಅಗತ್ಯ ಸುರಕ್ಷತಾ ನಿಯಮಗಳು ಹಾಗೂ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡ ಬಳಿಕವೇ ಶಿಬಿರಗಳನ್ನು ಪುನರಾರಂಭಿಸುವಂತೆ ಅರಣ್ಯ ಇಲಾಖೆ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಅರಣ್ಯ ಇಲಾಖೆ ಸೂಚಿಸಿರುವ ಸುರಕ್ಷತಾ ಮಾರ್ಗಸೂಚಿಗಳ ಅನ್ವಯ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರವಾಸಿಗರು ಹಾಗೂ ಆನೆಗಳಿಗೆ ಪ್ರತ್ಯೇಕ ಮಾರ್ಗ ಕಲ್ಪಿಸಲಾಗಿದ್ದು, ಪ್ರವಾಸಿಗರು ಮತ್ತು ಆನೆಗಳ ನಡುವೆ ನೇರ ಸಂಪರ್ಕ ಉಂಟಾಗದಂತೆ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡುವ ಹಾಗೂ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಸಹ ಅಳವಡಿಸಲಾಗಿದೆ.

ಸುರಕ್ಷತಾ ಕ್ರಮಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26, 2026ರಿಂದ ಸಕ್ರೆಬೈಲು ಆನೆ ಬಿಡಾರ ಸಾರ್ವಜನಿಕರ ಪ್ರವೇಶಕ್ಕೆ ಅಧಿಕೃತವಾಗಿ ಪುನರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಎಫ್‌ಒ ಪ್ರಸನ್ನ ಕುಮಾರ್ ಪಟೆಗಾರ್ ಅವರ ಸ್ಥಳ ಪರಿಶೀಲನೆ ಮಹತ್ವ ಪಡೆದುಕೊಂಡಿದೆ.

ಸಕ್ರೆಬೈಲು ಆನೆ ಬಿಡಾರ ಪುನರಾರಂಭವಾಗುತ್ತಿರುವುದರಿಂದ ಪ್ರವಾಸಿಗರು ಅರಣ್ಯ ಇಲಾಖೆ ಸೂಚಿಸಿರುವ ಸುರಕ್ಷತಾ ನಿಯಮಗಳನ್ನು ಪಾಲಿಸಿ ಆನೆಗಳೊಂದಿಗೆ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.

Sakrebailu Elephant Camp to be open to public from September 26: DFO Pategar visits, reviews safety measures   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close