ಸಂತೆಕಡೂರಿನಲ್ಲಿ ಕಾರಿಗೆ ಬೈಕ್ ಭೀಕರ ಡಿಕ್ಕಿ; 24 ವರ್ಷದ ಯುವಕ ಸ್ಥಳದಲ್ಲೇ ದಾರುಣ ಸಾವು-Horrific collision between bike and car at Santekaduru; 24-year-old man dies tragically on the spot

SUDDILIVE || SHIVAMOGGA

ಸಂತೆಕಡೂರಿನಲ್ಲಿ ಕಾರಿಗೆ ಬೈಕ್ ಭೀಕರ ಡಿಕ್ಕಿ; 24 ವರ್ಷದ ಯುವಕ ಸ್ಥಳದಲ್ಲೇ ದಾರುಣ ಸಾವು-Horrific collision between bike and car at Santekaduru; 24-year-old man dies tragically on the spot   

Road, accident


ಶಿವಮೊಗ್ಗ: ನಗರದ ಹೊರವಲಯದ ಸಂತೆಕಡೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 24 ವರ್ಷದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಸಂತೆಕಡೂರಿನ ದೇವಕಿ ರೆಸಾರ್ಟ್ ಬಳಿ ಈ ಅಪಘಾತ ಸಂಭವಿಸಿದ್ದು, ಮೃತ ಯುವಕನನ್ನು ರಕ್ಷಿತ್ (24) ಎಂದು ಗುರುತಿಸಲಾಗಿದೆ.

ದೇವಕಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಅತಿವೇಗವಾಗಿ ಬಂದ ಬೈಕ್ ರಭಸವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಕ್ಷಿತ್ ಹಾಗೂ ಬೈಕ್ ಸುಮಾರು 50 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.

ಅಪಘಾತದ ತೀವ್ರತೆಯಿಂದ ರಕ್ಷಿತ್‌ಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ಪಡೆದ ತುಂಗಾನಗರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದ ಮಹಜರು ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ ಎಂಬುದನ್ನು ಪೊಲೀಸರು ತನಿಖೆಯ ಬಳಿಕ ಸ್ಪಷ್ಟಪಡಿಸಬೇಕಿದೆ.

Horrific collision between bike and car at Santekaduru; 24-year-old man dies tragically on the spot   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close