ಸೆ. 29ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-Power outage in many areas of Shivamogga on Sept. 29

SUDDILIVE || SHIVAMOGGA

ಸೆ. 29ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ-Power outage in many areas of Shivamogga on Sept. 29


Power, cut


ಶಿವಮೊಗ್ಗ: 220 ಕೆವಿ ಎಂಆರ್‌ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬಸ್‌ನ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29ರಂದು ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಸೆ. 29ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ತಾವರೆಚಟ್ನಹಳ್ಳಿ ಎಎ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಶಿವಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇಔಟ್, ತ್ರಿಮೂರ್ತಿ ನಗರ ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆನ್ಷನ್ ಹಾಲ್, ಎಲ್‌ಬಿಎಸ್ ನಗರ, ಅಶ್ವತ್ಥ ನಗರ, ಕೀರ್ತಿ ನಗರ, ದೇವಂಗಿ 1ನೇ ಹಂತ, ಬಸವೇಶ್ವರ ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ನಗರ, ಕೃಷಿ ನಗರ 1ನೇ ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್, ಶಾಂತಿನಗರ/ರಾಗಿಗುಡ್ಡ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದರ ಜೊತೆಗೆ ಪಾಪ್ಯುಲರ್ ರೈಸ್ ಮಿಲ್, ಪೇಸ್ ಕಾಲೇಜು, ತರಳಬಾಳು ಬಡಾವಣೆ, ಈಶ್ವರ್ ರೈಸ್ ಮಿಲ್, ಸೇವಾಲಾಲ್ ನಗರ, ತಾವರೆಚಟ್ನಹಳ್ಳಿ ವಡ್ಡರಹಟ್ಟಿ, ವಿಜಯಲಕ್ಷ್ಮಿ ರೈಸ್ ಮಿಲ್, ದೇವಂಗಿ ತೋಟ, ತಾವರೆಚಟ್ನಹಳ್ಳಿ ಯುಜಿಡಿ ಪ್ಲಾಂಟ್, ಗುಂಡಪ್ಪ ಶೆಡ್ ಯುಜಿಡಿ ಪ್ಲಾಂಟ್, ಶಾದ್ ನಗರ, ಮಲ್ಲಿಕಾರ್ಜುನ ನಗರ, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ನಿರ್ವಹಣಾ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

Power outage in many areas of Shivamogga on Sept. 29

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close