SUDDILIVE || SHIKARIPURA
ಶಿಕಾರಿಪುರದಿಂದ ‘ಭಾರತ್ ಜೋಡೋ 2’ ರಾಜ್ಯಮಟ್ಟದ ಚಾಲನೆ-State-Level Launch of ‘Bharat Jodo 2’ From Shikaripura
ಶಿಕಾರಿಪುರ: ಭಾರತ್ ಜೋಡೋ ಯಾತ್ರೆಯ ಆಶಯಗಳನ್ನು ಮತ್ತೊಮ್ಮೆ ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯದ 82 ವಿಧಾನಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲಾಗಿರುವ ‘ಭಾರತ್ ಜೋಡೋ 2’ ಕಾರ್ಯಕ್ರಮಕ್ಕೆ ಶಿಕಾರಿಪುರದ ಕಿಟ್ಟದಹಳ್ಳಿಯಿಂದ ರಾಜ್ಯಮಟ್ಟದ ಚಾಲನೆ ನೀಡಲಾಯಿತು.
ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಸಚಿವರಾದ ಯತೀಂದ್ರ ಎಂಎಲ್ ಸಿ ಬಲ್ಕಿಸ್ ಭಾನು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಸಿ. ಯೋಗೀಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಶಿಕಾರಿಪುರದ ನಾರಾಜ ಗೌಡ, ಗೋಣಿಮಾಲ್ತೇಶ್ ಸೇರಿದಂತೆ ಸ್ಥಳೀಯ ಮುಖಂಡರೂ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಪಾದಯಾತ್ರೆ ಆರಂಭದ ವೇಳೆ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ, ಬಿಕೆ ಸಂಗಮೇಶ್ವರ್ ಹಾಗೂ ಸೂಡ ಅಧ್ಯಕ್ಷ ಸುಂದರೇಶ್ ಇನ್ನೂ ಭಾಗಿಯಾರಲಿಲ್ಲ.
ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿಯಿಂದ ಬೆಳಗ್ಗೆ 11.15ಕ್ಕೆ ಪಾದಯಾತ್ರೆ ಆರಂಭವಾಯಿತು. ದಾರಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಘೋಷಣೆಗಳನ್ನು ಕೂಗಿದರು.
ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ‘ಭಾರತ್ ಜೋಡೋ 2’ ಕಾರ್ಯಕ್ರಮದ ಮೂಲಕ ಪಕ್ಷದ ಸಂಘಟನೆ ಬಲಪಡಿಸುವುದು ಹಾಗೂ ಭಾರತ್ ಜೋಡೋ ಯಾತ್ರೆಯ ಆಶಯಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
State-Level Launch of ‘Bharat Jodo 2’ From Shikaripura
.
