‘ಖಾಲಿ ಚೊಂಬು’ ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ-BJP protests against Congress government by displaying 'empty mug'

 SUDDILIVE || SHIVAMOGGA

‘ಖಾಲಿ ಚೊಂಬು’ ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ-BJP protests against Congress government by displaying 'empty mug'    
Empty, mug

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಹಣಕಾಸು ನಿರ್ವಹಣೆ ಹಾಗೂ ಜನಪರ ಯೋಜನೆಗಳ ಅನುಷ್ಠಾನವನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕಾರ್ಯಕರ್ತರು ಕೈಯಲ್ಲಿ ‘ಖಾಲಿ ಚೊಂಬು’ ಹಿಡಿದು ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಉಂಟಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಸರ್ಕಾರದ ಹಣಕಾಸು ನಿರ್ವಹಣೆ ಕುರಿತು ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ತೆರಿಗೆದಾರರ ಹಣದ ಬಳಕೆ ಕುರಿತು ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ನ್ನ ನಂಬಿದರೆ ಕೈಗೆ ಚೊಂಬು ಎಂದು ಅಣುಕು ಶವ ಪ್ರದರ್ಶನ ಮಾಡಲಾಯಿತು. 

ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಸರ್ಕಾರದ ಆಡಳಿತ ನೀತಿಗಳನ್ನು ಟೀಕಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹಣಕಾಸಿನ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದರು. ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯ ಅನುದಾನ ದೊರೆಯದೆ ಹಲವು ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಅವರು ದೂರಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಹರಿಕೃಷ್ಣ, ದತ್ತಾತ್ರಿ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

BJP protests against Congress government by displaying 'empty mug'  

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
Join Telegram Group
close